ಈದ್‌ಮಿಲಾದ್ ಆಚರಣೆ-ಕೋವಿಡ್ ಮಾರ್ಗಸೂಚಿ ಪಾಲಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ​: ​ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬವನ್ನು ಅಕ್ಟೋಬರ್ 29 ರಂದು​ ಆಚರಿಸಲಾಗುತ್ತಿದ್ದು, ಈ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಒಂದೆಡೆ ಸೇರುವುದು ಸಾಮಾನ್ಯವಾಗಿದ್ದು, ಸಾರ್ವಜನಿಕರ​ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು​ ​ಕೈಗೊಳ್ಳ​ ​ಬೇಕಾಗಿರುವುದರಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸುವ ಕುರಿತು ಈ ಕೆಳಕಂಡ ಮಾರ್ಗಸೂಚಿಗಳನ್ನು​ ​ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.​​

ಜಿಲ್ಲೆಯಾದ್ಯಂತ ಅಕ್ಟೋಬರ್ 29 ರಂದು ಆಚರಿಸಲಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಸಾಮೂಹಿಕ ಮೆರ
ವಣಿಗೆ​​ (ಜುಲೂಸ್), ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.​ ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ/ಸಾಂಸ್ಕೃತಿಕ​​ ಕಾರ್ಯಕ್ರಮ ಸಭೆ, ಸಮಾರಂಭಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಮಸೀದಿಗಳಲ್ಲಿ, ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ ಕೋವಿಡ್-19 ರ ಶಿಷ್ಠಾಚಾರದೊಂದಿಗೆ ಸಾಕಷ್ಟು ಮುನ್ನೆ ಚ್ಚೆರಿಕೆ​ ಕ್ರಮಗಳ ಜೊತೆಗೆ ದೈಹಿಕ ಅಂತರ ಕಾಪಾಡಿಕೊಳ್ಳುವುದರ ಮೂಲಕ ನೆರವೇರಿಸಬೇಕು.ಸಾರ್ವ ಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳು/ಡಿಜಿಟಲ್ ಸೌಂಡ್ ಸಿಸ್ಟಮ್ (ಡಿಜೆ) ಬಳಕೆಯನ್ನು ನಿಷೇಧಿಸಲಾಗಿದೆ.

ಮುಖಗವಸುಗಳನ್ನು ಕಡ್ಡಾಯವಾಗಿ ಎಲ್ಲರೂ ಉಪಯೋಗಿಸಬೇಕು. 60 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು 10ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಹಬ್ಬದ ಆಚರಣೆಯನ್ನು ಮಾಡಬೇಕು. ಸ್ಯಾನಿಟೈಸರ್ ಹಾಗೂ ಸೋಪಿ ನೊಂದಿಗೆ ಕೈ​ ತೊಳೆಯಲು ಪ್ರವೇಶ ದ್ವಾರದಲ್ಲಿ ಸೂಕ್ತ ವ್ಯವಸ್ಥೆಯನ್ನು ಮಾಡಬೇಕು. 
 
ಕಡ್ಡಾಯವಾಗಿ ವೈಯಕ್ತಿಕವಾಗಿ ಎಲ್ಲರೂ 6 ಅಡಿ​ ಅಂತರದ ದೈಹಿಕ /ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳ ಬೇಕು. ಖಬರಸ್ಥಾನ್ ಒಳ​ಗೊಂಡಂತೆ  ಯಾವುದೇ ರೀತಿಯ ತೆರೆದ​ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನೆ ಮುಂತಾದವುಗಳನ್ನು ಆಯೋಜಿಸುವಂತಿಲ್ಲ.​ 
ಮೇಲ್ಕಂಡ ನಿರ್ದೇಶನವನ್ನು ಪಾಲಿಸದೆ ವ್ಯತಿರಿಕ್ತವಾಗಿ ವರ್ತಿಸಿದಲ್ಲಿ ಅಂತವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ​ ಅಧ್ಯಾದೇಶ 2020 ಕಲಂ 5 (3), 6(1) (2) ರನ್ವಯ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 57 ರನ್ವಯ ಕಾನೂನು​ ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.​​
 
 
 
 
 
 
 
 
 
 
 

Leave a Reply