ಬೈಲೂರು ರಥೋತ್ಸವ

ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಮಂಗಳವಾರ  ರಥೋತ್ಸವ ನಡೆಯಿತು. ಶ್ರೀ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.
ಭಜನಾ ಕಾರ್ಯಕ್ರಮ, ಸಾರ್ವಜನಿಕ ಅನ್ನಸಂತರ್ಪಣೆ, ಚಂಡೆ ವಾದ್ಯಗಳೊಂದಿಗೆ ಬಲಿ ಉತ್ಸವ ದರ್ಶನ ಸೇವೆ ನಡೆಯಿತು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಅರ್ಚಕ ವೃಂದ ಹಾಗೂ ನೂರಾರು  ಭಕ್ತರು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply