ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ದಿ. ಸರ್ದಾರ್ ವಲ್ಲಭ ಭಾಯಿ ಪಾಟೇಲ್ ಜನ್ಮದಿನಾಚರಣೆ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ದಿ. ಸರ್ದಾರ್ ವಲ್ಲಭ ಭಾಯಿ ಪಾಟೇಲ್ ಜನ್ಮದಿನಾಚರಣೆ, ದಿ. ಶ್ರೀಮತಿ ಇಂದಿರಾ ಗಾಂಧಿ ಪುಣ್ಯ ಸ್ಮರಣೆ ಹಾಗೂ ಕಿಸಾನ್ ಅಧಿಕಾರ್ ದಿವಸ ಆಚರಿಸುವ ಆಚರಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಭಾರತವನ್ನು ಗುಲಾಮಗಿರಿಯಿಂದ ಮುಕ್ತಗೊಳಿಸಿ ಸರ್ವ ತಂತ್ರ ಸ್ವತಂತ್ರದ ಏಕ ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿ ನಿರ್ಮಾಣವಾಗುವುದಕ್ಕೆ ಸರ್ದಾರ್ ವಲ್ಲಭ ಭಾಯಿ ಪಟೇಲರ ಅಪಾರ ಕೊಡುಗೆ ನೀಡಿದ್ದಾರೆ. ಅವರ ಜನ್ಮ ದಿನವನ್ನು ನೆನಪಿಸಿಕೊಳ್ಳುತ್ತೇನೆ ಎಂದರು.

ಹಿಂದುಳಿದ ವರ್ಗದ ಜನತೆಗೆ ಆರ್ಥಿಕ ಸ್ವಾತಂತ್ರ್ಯವನ್ನು ಕೊಟ್ಟ ಧೀಮಂತ ಮಹಿಳೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿ ಭಾರತ ಎಂದೂ ಮರೆಯದ ವ್ಯಕ್ತಿತ್ವ ಹೊಂದಿದ ದಿವಂಗತ ಇಂದಿರಾ ಗಾಂಧಿಯವರ ಪುಣ್ಯ ದಿನವಾದ ಇಂದು ಅವರನ್ನು ನೆನಪಿಸಿ ಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಇದರೊಂದಿಗೆ ಕೇಂದ್ರ ಸರಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ‘ಕಿಸಾನ್ ಅಧಿಕಾರ್ ದಿವಸ್’ ಆಚರಣೆಯೊಂದಿಗೆ ಮುಂದಿನ ದಿನಗಳಲ್ಲಿ ರೈತ ವಿರೋಧಿ ನೀತಿಯ ವಿರುದ್ಧ ಬ್ರಹತ್ ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಶೋಕ್ ಕುಮಾರ್ ಹೇಳಿದರು.

ಕುಂದಾಪುರ ಕಿಸಾನ್ ಘಟಕದ ಅಧ್ಯಕ್ಷರಾದ ಭಾಸ್ಕರ್ ಶೆಟ್ಟಿ ಕುಂದಾಪುರ, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಭುಜಂಗ ಶೆಟ್ಟಿ ಈ ಸಂದರ್ಭದಲ್ಲಿ ಮಾತನಾಡಿದರು.ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ ಸ್ವಾಗತಿಸಿ, ಪ್ರ. ಕಾರ್ಯದರ್ಶಿ ವೈ ಸುಕುಮಾರ್ ವಂದಿಸಿದರು, ಪ್ರ. ಕಾರ್ಯದರ್ಶಿ ಅಣ್ಯಯ್ಯ ಶೇರಿಗಾರ್ ನಿರೂಪಿಸಿದರು.

ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಮುಖಂಡರಾದ ಬಿ. ನರಸಿಂಹ ಮೂರ್ತಿ, ವೆರೋನಿಕಾ ಕರ್ನೇಲಿಯೋ, ಭಾಸ್ಕರ್ ರಾವ್ ಕಿದಿಯೂರು, ಹರೀಶ್ ಕಿಣಿ, ಶಬ್ಬೀರ್ ಅಹ್ಮದ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಹಬೀಬ್ ಆಲಿ, ರಮೇಶ್ ಕಾಂಚನ್, ರೋಶನಿ ಒಲಿವರ್, ಜ್ಯೋತಿ ಹೆಬ್ಬಾರ್,  ವಿಜಯ ಪೂಜಾರಿ, ಹರೀಶ್ ಶೆಟ್ಟಿ ಪಾಂಗಳ, ಶಶಿಧರ ಶೆಟ್ಟಿ ಎಲ್ಲೂರು, ಯತೀಶ್ ಕರ್ಕೇರಾ, ಉಪೇಂದ್ರ ಮೆಂಡನ್, ಕೇಶವ ಕೋಟ್ಯಾನ್, ಉಪೇಂದ್ರ ಗಾಣಿಗ.

ಪ್ರಭಾಕರ ನಾಯಕ್ ಬೈಂದೂರು, ಚಂದ್ರಿಕಾ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ಇಸ್ಮಾಯಿಲ್ ಆತ್ರಾಡಿ, ಉದ್ಯಾವರ ನಾಗೇಶ್ ಕುಮಾರ್, ವಿಶ್ವಾಸ್ ಅಮೀನ್, ಸೌರಬ್ ಬಲ್ಲಾಳ್, ಲೂಯಿಸ್ ಲೋಬೋಹರೀಶ್ ಶೆಟ್ಟಿ ಕೀಳಿಂಜೆ, ನಾಗಪ್ಪ ಕೊಟ್ಟಾರಿ ವಂಡ್ಸೆ, ಜಯ ಶೆಟ್ಟಿ ಬನ್ನಂಜೆ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply