ಧಾರ್ಮಿಕ ಆಚರಣೆ ಬದಲಾವಣೆಗೆ ಪ್ರೇರಣೆ: ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ

ಆರ್ಡಿ: ಆರ್ಡಿ ಸಮೀಪದ ಕೊಂಜಾಡಿ ಶ್ರೀದುರ್ಗಾಪರಮೇಶ್ವರಿ ದೇವಳದಲ್ಲಿ ಕೊಂಜಾಡಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ವತಿಯಿಂದ ಆಯೋಜಿಸಲಾದ ನವರಾತ್ರಿ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾ ಪ್ರಸನ್ನ ಸ್ವಾಮಿಜಿ ಭಾಗವಸಿ ಪ್ರವಚನ ನೀಡಿದರು.

ಸೃಷ್ಟಿಯಲ್ಲಿ ಮಾನವ ಜನ್ಮ ಅತ್ಯಂತ ಶ್ರೇಷ್ಠ. ಹಿಂದಿನಿಂದಲೂ ಹಿರಿಯರು ಆಚರಿಸಿಕೊಂಡು ಬಂದ ಸಂಸ್ಕಾರ, ಧಾರ್ಮಿಕ ಆಚರಣೆಗಳು ಇಂದಿಗೂ ಪವಿತ್ರತೆ ಉಳಿಸಿಕೊಂಡು ಜನರ ಜೀವನದಲ್ಲಿ ಹೊಸ ಚೈತನ್ಯದೊಂದಿಗೆ ಬದಲಾವಣೆಗೆ ಪ್ರೇರಣೆ ನೀಡುತ್ತಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿದ್ಯಾಭ್ಯಾಸದೊಂದಿಗೆ ನಿರಂತರ ಭಜನೆಯಲ್ಲಿ ಪಾಲ್ಗೊಳ್ಳುವ ಭಜನಾ ಮಂಡಳಿಯ ಬಾಲಕರಿಗೆ ಶ್ರೀಗಳು ಶಾಲು ಹೊದಿಸಿ, ಭಜನಾ ತಾಳ ನೀಡಿ ಅಭಿನಂದಿಸಿದರು.ಮತ್ತು ಹೆಬ್ರಿ ತಾಪಂ ಉಪಾಧ್ಯಕ್ಷ ಎಸ್.ಚಂದ್ರಶೇಖರ್ ಶೆಟ್ಟಿ ಸೂರ‌್ಗೋಳಿ, ಬೆಳ್ವೆ ವಿ.ಎಸ್.ಎಸ್.ಎನ್ ಆಡಳಿತ ಮಂಡಳಿ ನಿರ್ದೇಶಕಿ ಲಲಿತಾ ಶೆಡ್ತಿ, ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಸಾವಿತ್ರಿ, ಆಶಾ ಕಾರ್ಯಕರ್ತೆಯರಾದ ವನಜಾ, ಚಂದ್ರಾವತಿ ಹಾಗೂ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿಯ ಸಾಧಕರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಈ ಸಂದರ್ಭದ ಕೊಂಜಾಡಿ ಶ್ರೀ ದುರ್ಗಾಪರಮೇಶ್ವರಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸೀತಾರಾಮ ಶೆಟ್ಟಿ ತೊನ್ನಾಸೆ, ಜೀರ್ಣೋದ್ಧಾರ ಸಮಿತಿ ಮಾಜಿ ಗೌರಾವಾಧ್ಯಕ್ಷ ಟಿ.ಪ್ರಶಾಂತ ಶೆಟ್ಟಿ ಆರ್ಡಿ, ತಂತ್ರಿ ಸದಾಶಿವ ಭಟ್ ಬೇಳಂಜೆ, ಅರ್ಚಕ ಅರುಣಾಚಲ ಜೋಯಿಸ್, ಕೊಂಜಾಡಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಹಿರಿಯ ಸದಸ್ಯ ಶ್ರೀಧರ ಕಾಮತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದರ್ಶನ ಶೆಟ್ಟಿ ಸ್ವಾಗತಿಸಿ ಸಂತೋಷ ಶೆಟ್ಟಿ ಪ್ರಸ್ತಾವಿಸಿದರು. ಗಣೇಶ ಅರಸಮ್ಮಕಾನು ಕಾರ್ಯಕ್ರಮ ನಿರೂಪಿಸಿದರು ಮತ್ತು ರುದ್ರಯ್ಯ ಆಚಾರ್ಯ ವಂದಿಸಿದರು.

 
 
 
 
 
 
 
 
 
 
 

Leave a Reply