Janardhan Kodavoor/ Team KaravaliXpress
27.6 C
Udupi
Wednesday, August 17, 2022
Sathyanatha Stores Brahmavara

ಅಮರಶಿಲ್ಪಿ ಜಕಣಾಚಾರ್ಯ ಸಂಸ್ಮರಣಾ ದಿನ- ಸರಳ ಆಚರಣೆ

ಉಡುಪಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ವತಿಯಿಂದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶುಕ್ರವಾರ ನಡೆದ ವಿಶ್ವಕರ್ಮ ಶಿಲ್ಪಾಚಾರ್ಯ ಅಮರ ಶಿಲ್ಪಿ ಜಕಣಾಚಾರ್ಯ ಸಂಸ್ಮರಣಾ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅಮರಶಿಲ್ಪಿ ಜಕಣಾಚಾರ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ
ಸಲ್ಲಿಸಿದರು.

ಬಿಳಿಯಾರು ಗಣಪತಿ ಆಚಾರ್ಯ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಜಿಲ್ಲಾಧ್ಯಕ್ಷ ನೆರಂಬಳ್ಳಿ ರಮೇಶ್ ಆಚಾರ್ಯ, ವಿಶ್ವಕರ್ಮ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಮಧು ಆಚಾರ್ಯ, ವಿಶ್ವಕರ್ಮ ಮುಖಂಡರಾದ ಅಲೆವೂರು ಯೋಗೀಶ್ ಆಚಾರ್ಯ, ಬಿ.ಎ.ಆಚಾರ್ಯ ಮಣಿಪಾಲ.

ಉಡುಪಿಯ ಕೆ.ಮುರಳೀಧರ್, ವಿವಿಧ ಮುಖಂಡರು, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಜಿಲ್ಲಾ ಘಟಕದ ಗೌರವ ಅಧ್ಯಕ್ಷ ಗಂಗಾಧರ್ ಆಚಾರ್ಯ ಬಾರ್ಕೂರು, ಹೆಬ್ರಿ ತಾಲ್ಲೂಕು ಘಟಕದ ಅಧ್ಯಕ್ಷ ಎಚ್. ರಮೇಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಪತ್ರಕರ್ತ ಸುಕುಮಾರ್ ಮುನಿಯಾಲ್.

ಯುವ ಘಟಕದ ಜಿಲ್ಲಾಧ್ಯಕ್ಷ ಕೋಟ ರಾಮಕೃಷ್ಣ ಆಚಾರ್ಯ, ಮಲ್ಪೆಯ ಕುಮಾರ್ ಆಚಾರ್ಯ, ಕುಂದಾಪುರದ ಕಾರ್ತಿಕ್ ಆಚಾರ್ಯ, ಪ್ರಮೋದ್ ಆಚಾರ್ಯ, ವಿವಿಧ ಅಧಿಕಾರಿಗಳು, ವಿಶ್ವಕರ್ಮ ಸಮುದಾಯದ ಪ್ರಮುಖರು ಭಾಗವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಸ್ವಾಗತಿಸಿ, ನಿರೂಪಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!