ಕಿತ್ತೂರು ರಾಣಿ ಚೆನ್ನಮ್ಮ ದಿನಾಚರಣೆಯನ್ನು ಶುಕ್ರವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ
ಸರಳವಾಗಿ ಆಚರಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ
ಪುಷ್ಪಾರ್ಚನೆ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.