ಕೊಡವೂರು ಸಾರ್ವಜನಿಕ ಗಣೇಶೋತ್ಸವ

ಸಮ್ಮಾನ, ಬಹುಮಾನ ವಿತರಣೆ
ಕೊಡವೂರಿನ 55 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ, ಬಹುಮಾನ ವಿತರಣಾ ಕಾರ್ಯಕ್ರಮವು  ಜರಗಿತು. ಅತೀ ಚಿಕ್ಕದಾದ ನೂಲು ಕಲೆಯಲ್ಲಿ ಅನನ್ಯ ಸಾಧನೆ ಮಾಡಿದ ನಿಟ್ಟಿನಲ್ಲಿ  ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್  ನಲ್ಲಿ ಸ್ಥಾನ ಪಡೆದ ಬಹುಮುಖ ಪ್ರತಿಭೆ ಗಗನ್ ಜೆ ಸುವರ್ಣ ಅವರನ್ನು ಸಮ್ಮಾನಿಸಲಾಯಿತು.
ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಗೋಪಾಲ್ ಸಿ.ಬಂಗೇರ ಇವರು ಮಾತನಾಡಿ ಸಮಾಜದ ಎಲ್ಲರನ್ನೂ ಒಗ್ಗೂಡಿಸಿಕೊಂಡು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಮಾಜಮುಖಿ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಆರೋಗ್ಯಪೂರ್ಣ ಸಮಾಜದ ನಿರ್ಮಾಣಕ್ಕೆ ಕೈ ಜೋಡಿಸುತ್ತಿರುವ ಗಣೇಶೋತ್ಸವ ಸಮಿತಿಗಳ ಕಾರ್ಯ ಶ್ಲಾಘನೀಯ, ಅನುಕರಣೀಯ ಎಂದರು.
ಕೊಡವೂರು ಶಂಕರನಾರಾಯಣ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸಾಧು ಸಾಲ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಗಣೇಶೋತ್ಸವದ ಅಂಗವಾಗಿ ನಡೆಸಲಾದ ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಆಹಾರ,ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧೀನ ಕಾರ್ಯದರ್ಶಿ ಸದಾನಂದ ಯು.ಎಸ್, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೃಷ್ಣ ದೇವಾಡಿಗ, ಗೌರವಾಧ್ಯಕ್ಷ ರತ್ನಾಕರ ಅಮೀನ್, ಕಾರ್ಯದರ್ಶಿ ಶರತ್ ಚಂದರ್, ಕೋಶಾಧಿಕಾರಿ ವಾದಿರಾಜ್ ಟಿ.ಸಾಲ್ಯಾನ್, ಸಾಂಸ್ಕೃತಿಕ ಕಾರ್ಯದರ್ಶಿ ಬಾಲಕೃಷ್ಣ ಕೊಡವೂರು, ಸಲಹೆಗಾರ ರಮೇಶ್ ಅಮೀನ್, ಸುಮನಸಾ ಕೊಡವೂರು ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು, ಯುವಕ ಸಂಘದ ಅಧ್ಯಕ್ಷ ಪ್ರಭಾತ್ ಕೋಟ್ಯಾನ್ ಉಪಸ್ಥಿತರಿದ್ದರು. ಸತೀಶ್ ಕೊಡವೂರು ಸ್ವಾಗತಿಸಿ, ನಿರೂಪಿಸಿದರು.

Leave a Reply