ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ, ವಿಶ್ವಗುರು ಶ್ರೀಮನ್ಮಧ್ವಾಚಾರ್ಯರು ಶ್ರೀಕೃಷ್ಣನನ್ನು ಪ್ರತಿಷ್ಠಾಪಿಸಿದ ಅಂಗವಾಗಿ ನಡೆಯುವ ಸಪ್ತೋತ್ಸವದ ಧಾರ್ಮಿಕ ಕಾರ್ಯಕ್ರಮ

ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ, ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ, ವಿಶ್ವಗುರು ಶ್ರೀಮನ್ಮಧ್ವಾಚಾರ್ಯರು ಶ್ರೀಕೃಷ್ಣನನ್ನು ಪ್ರತಿಷ್ಠಾಪಿಸಿದ ಅಂಗವಾಗಿ ನಡೆಯುವ ಸಪ್ತೋತ್ಸವದ ಕಾರ್ಯಕ್ರಮವನ್ನು  ಪರ್ಯಾಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮೀನುಗಾರಿಕಾ ಮಂತ್ರಿಗಳಾದ  ಮಾನ್ಯ ಕೋಟ ಶ್ರೀನಿವಾಸ ಪೂಜಾರಿ,ಉಡುಪಿ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ, ಉಡುಪಿ ಶಾಸಕರಾದ ಕೆ.ರಘುಪತಿ ಭಟ್, ಉಡುಪಿ ನಗರಸಭಾಧ್ಯಕ್ಷರಾದ ಸುಮಿತ್ರಾ ನಾಯಕ್  ಉಪಸ್ಥಿತರಿದ್ದು,

ವಿವಿಧ ಕ್ಷೆತ್ರಗಳಲ್ಲಿ ಸಾಧನೆಗೈದ ಮಹನೀಯರಾದ  ಕೊರಂಗ್ರಪಾಡಿ ವಿದ್ವಾನ್  ಸೀತಾರಾಮ ಆಚಾರ್ಯ, ಅದಮಾರಿನ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ನಾಗರತ್ನ ರಾವ್, ಮಲಬಾರ್ ಗೋಲ್ಡ್ ಉಡುಪಿ ಶಾಖೆಯ ವ್ಯವಸ್ಥಾಪಕರಾದ ರಾಘವೇಂದ್ರ ನಾಯಕ್ ಇವರನ್ನು ಪರ್ಯಾಯ ಶ್ರೀಪಾದರು ಸನ್ಮಾನಿಸಿದರು.

 
 
 
 
 
 
 
 
 
 
 

Leave a Reply