Janardhan Kodavoor/ Team KaravaliXpress
26.6 C
Udupi
Thursday, August 11, 2022
Sathyanatha Stores Brahmavara

ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಗೋ ಮಾತಾ ಪೂಜನ

ಗೋವುಗಳಿಗೆ ಸನಾತನ ಹಿಂದೂ ಧರ್ಮದಲ್ಲಿ ಪೂಜ್ಯನೀಯ ಸ್ಥಾನವಿದೆ. ಗೋ ಮಾತಾ ಪೂಜನ ಸನಾತನ ಹಿಂದೂ ಧರ್ಮದ ಪ್ರತೀಕ. ಅವಿಭಕ್ತ ಕುಟುಂಬ ನಶಿಸಿ ಹೋಗುತ್ತಿರುವ ಈ ಕಾಲ ಘಟ್ಟದಲ್ಲಿ ಪ್ರತಿಯೊಬ್ಬರೂ ದೀಪಾವಳಿ ಹಬ್ಬದ ಅಂಗವಾಗಿ ಗೋ ಮಾತಾ ಪೂಜನ ಕಾರ್ಯಕ್ರಮವು ಹಮ್ಮಿಕೊಂಡು ಸನಾತನ ಹಿಂದೂ ಧರ್ಮದ ಗತವೈಭವ ಮರುಕಳಿಸುವಂತೆ ಮಾಡುವುದು ಇಂದಿನ ಅಗತ್ಯತೆ .
ಈ ನಿಟ್ಟಿನಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ನಗರ ಪ್ರದೇಶದ ಮಹಿಳೆಯರನ್ನು ಸಂಘಟಿಸಿ ಗೋ ಮಾತಾ ಪೂಜನ ಕಾರ್ಯಕ್ರಮವನ್ನು ಪ್ರಥಮ ಬಾರಿಗೆ ಬಿಜೆಪಿ ಕಛೇರಿಯಲ್ಲಿ ಆಯೋಜಿಸಿರುವುದು ಪ್ರಶಂಸನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಸೋಮವಾರ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ.ಎಸ್ ಶೆಟ್ಟಿಯವರ ನೇತೃತ್ವದಲ್ಲಿ ಜಿಲ್ಲಾ ಕಛೇರಿಯ ಬಳಿ ನಡೆದ ಗೋ ಮಾತಾ ಪೂಜನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭಾ ಅದ್ಯಕ್ಷೆ ಸುಮಿತ್ರಾ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯಶ್‌ಪಾಲ್ ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ಹೆಗ್ಡೆ, ಸಂಘ ಪರಿವಾರದ ಹಿರಿಯ ಮಹಿಳೆ ಸುಪ್ರಭಾ ಆಚಾರ್ಯ, ಜಿಲ್ಲಾ ಮಹಿಳಾ ಮೋರ್ಚಾ ಉಸ್ತುವಾರಿ ಗೀತಾಂಜಲಿ ಸುವರ್ಣ. 

ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಪ್ರಮೀಳಾ ಹರೀಶ್, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಸರೋಜಾ ಶೆಟ್ಟಿಗಾರ್, ಮಾತೃ ಮಂಡಳಿ ಕಡಿಯಾಳಿ ಅಧ್ಯಕ್ಷೆ ಪದ್ಮಾ ರತ್ನಾಕರ್, ಹಿರಿಯರಾದ ಮಂಜುಳಾ ನಾಯಕ್, ಶಕುಂತಳಾ ಶೆಟ್ಟಿ, ಜಯಶ್ರೀ ಶೇಟ್, ಪದಾಧಿಕಾರಿಗಳಾದ ವಿದ್ಯಾ ಪೈ, ನೀರಜಾ ಶೆಟ್ಟಿ, ರೇಣುಕಾ ಕಡೆಕಾರ್, ಮಾಯಾ ಕಾಮತ್, ಶೋಭಾ, ಆಶಾ ಶೆಟ್ಟಿ, ರಮಾ, ಅಶ್ವಿನಿ, ದಯಾಶಿನಿ, ಲೈಲಾ, ಜುಬೇದಾ, ಸುಜಾಲ, ಸುಧಾ ಪೈ ಮುಂತಾದವರು ಉಪಸ್ಥಿತರಿದ್ದರು. 
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!