ನಾಡ ಹಬ್ಬ ದಸರಾದಲ್ಲಿ 2000 ಜನರಿಗಷ್ಟೇ ಭಾಗವಹಿಸಲು ಅವಕಾಶ 

ಮೈಸೂರು: ಈ ಬಾರಿ ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾಕ್ಕೂ ಕೊರೋನಾ ಕರಿಛಾಯೆ ಆವರಿಸಿದೆ. ಹೌದು ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ದಸರಾವನ್ನು ಸರಳವಾಗಿ ಆಚರಿಸಲು ನಿರ್ಧರಿಸಿದೆ. ಆದ್ದರಿಂದ ಜಂಬೂ ಸವಾರಿ ಮೆರವಣಿಗೆಯಲ್ಲಿ ಕೇವಲ 2000 ಜನರು ಪಾಲ್ಗೊಳ್ಳಲು ಅವಕಾಶ ನೀಡಲು ಚಿಂತಿಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.ಭಾನುವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೋನಾ ಹಿನ್ನೆಲೆಯಲ್ಲಿ ಸರಳ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಉದ್ಘಾಟನಾ ಕಾರ್ಯ ಕ್ರಮಕ್ಕೆ250, ಅರಮನೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1000 ಮಂದಿ, ಜಂಬೂಸವಾರಿಗೆ 2000 ಜನ ಸೇರಲು ಮಾತ್ರ ಅವಕಾಶ ನೀಡಲು ಚಿಂತಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ದೊರೆತ ನಂತರವಷ್ಟೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.ಇನ್ನು ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಕಲಾವಿದರಿಗೆ ಕೋವಿಡ್ ಟೆಸ್ಟ್ ಮಾಡಲಾಗುವುದು. ಐದು ದಿನ ಮುಂಚೆ ಟೆಸ್ಟ್ ಮಾಡಿಸಿಕೊಂಡ ಕಲಾವಿದರಿಗೆ ಮಾತ್ರ ಮೆರವಣಿಗೆಯಲ್ಲಿ ಭಾಗವಹಿಸುವ ಅವಕಾಶ ವಿರುತ್ತದೆ. ದಸರಾ ಪಾರಂಪರಿಕವಾಗಿ ನಡೆದು ಬಂದ ಹಬ್ಬ , ಹೀಗಾಗಿ ಸಾಂಸ್ಕೃತಿಕ ಕಾರ್ಯ ಕ್ರಮಗಳನ್ನು ನಡೆಸುವುದು ಅಗತ್ಯವಿದ್ದು ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

 
 
 
 
 
 
 
 
 

Leave a Reply