ಉಡುಪಿ ಕೃಷ್ಣ ಮಠದ ಪರ್ಯಾಯ ಪಂಚಶತಮಾನೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ವೈ

ಉಡುಪಿ: ಸೋದೆ ಶ್ರೀ ವಾದಿರಾಜ ಯತಿಗಳಿಂದ ಪ್ರಾರಂಭಿಸಲ್ಪಟ್ಟ ದ್ವೈವಾರ್ಷಿಕ ಪರ್ಯಾಯದ ಪಂಚಶತಮಾನೋತ್ಸವ ಕಾರ್ಯಕ್ರಮವು ಜನವರಿ 16ರಿಂದ 23 ರವರೆಗೆ ನಡೆಯಲಿದೆ.

ಈ ಹಿನ್ನೆಲೆ ನಾಡಿನ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದು, ಧಾರ್ಮಿಕ ಸಭೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಭಿನ್ನ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯಲಿದೆ ಎಂದು ಪರ್ಯಾಯ ಅದಮಾರು ಮಠದ ವ್ಯವಸ್ಥಾಪಕರಾದ ಗೋವಿಂದ್ ರಾಜ್ ಹೇಳಿದರು. 

ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿದ್ವಾಂಸರಿಂದ ಪ್ರತಿದಿನ ವಿಶೇಷವಾಗಿ ಅಷ್ಟಮಠಗಳ ಕುರಿತು, ಪ್ರತಿ ಮಠಗಳ ಪರ್ಯಾಯಾವಧಿಯಲ್ಲಿ ನಡೆದ ಸಾಧನೆಗಳನ್ನು ನೆನಪಿಸುವ ಉಪನ್ಯಾಸಗಳು ನಡೆಯಲಿವೆ. 

ಭಕ್ತಾದಿಗಳಿಗೆ ಶ್ರೀಕೃಷ್ಣ ದೇವರ ದರ್ಶನಕ್ಕೆ ಅನುಕೂಲವಾಗುವಂತೆ ನೂತನವಾಗಿ ನಿರ್ಮಿಸಿದ “ವಿಶ್ವಪಥ”ದಲ್ಲಿ ಸಾಗಿದರೆ ಕಟ್ಟಿಗೆ ರಥ, ಮಧ್ವ ಸರೋವರ, ಶ್ರೀಕೃಷ್ಣ ದೇವರ ಗರ್ಭಗುಡಿಯ ಸುವರ್ಣ ಗೋಪುರವನ್ನು ವೀಕ್ಷಿಸಿ ದೇವರ ದರ್ಶನ ಮಾಡಿ ಭೋಜನಶಾಲೆಯಲ್ಲಿ ಪ್ರಸಾದ ಸ್ವೀಕರಿಸಿ ಹೊರಹೋಗುವ ವ್ಯವಸ್ಥೆಯನ್ನು ಮಾಡಲಾಗಿದೆ.

ಈ ವಿಶ್ವಪಥವನ್ನು ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪನವರು ಜನವರಿ 18ರಂದು ಉದ್ಘಾಟಿಸಲಿದ್ದಾರೆ ಎಂಬ ಮಾಹಿತಿ ನೀಡಿದರು.

ಇನ್ನು 16 ರಂದು ಪ್ರಾರಂಭ ಗೊಳ್ಳುವ ಪಂಚಶತಮಾನೋತ್ಸವ ಪರ್ಯಾಯ ಕಾರ್ಯಕ್ರಮದ ಸಮಾರೋಪ ಸಮಾರಂಭ 23 ರ ಶನಿವಾರ ನಡೆಯಲಿದೆ ಎಂದರು.

 
 
 
 
 
 
 
 
 
 
 

Leave a Reply