Janardhan Kodavoor/ Team KaravaliXpress
26.6 C
Udupi
Thursday, August 11, 2022
Sathyanatha Stores Brahmavara

ಪೇಜಾವರ ಶ್ರೀಗಳಿಗೆ ‘ಎಕ್ಸ್ ‘ ಶ್ರೇಣಿ ಭದ್ರತೆ

ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಪೇಜಾವರ ಶ್ರೀ ವಿಶ್ವ ಪ್ರಸನ್ನತೀರ್ಥ ಶ್ರೀಪಾದರಿಗೆ ಕರ್ನಾಟಕ ಸರಕಾರ‌ ಎಕ್ಸ್ ಶ್ರೇಣಿ ಭದ್ರತೆ ಮತ್ತು ಬೆಂಗಾವಲು ವಾಹನ ಸೌಕರ್ಯ ಮಂಜೂರು ಮಾಡಿದ್ದು ಗುರುವಾರದಿಂದಲೇ ಒದಗಿಸಲಾಗಿದೆ .

ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ಸದ್ಯ ನಿರತಾಗಿರುವ ಶ್ರೀಗಳು ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ . ಈ ಹಿನ್ನಲೆಯಲ್ಲಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ ರಘುಪತಿ ಭಟ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು .

ಇದಕ್ಕೆ ತ್ವರಿತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ , ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ , ಶಾಸಕ ಭಟ್ ಹಾಗೂ ರಾಜ್ಯ ಪೋಲೀಸ್ ಮಹಾನಿರ್ದೇಶಕರಿಗೆ ಪೇಜಾವರ ಮಠ ಕೃತಜ್ಞತೆ ಸಲ್ಲಿಸಿದೆ .

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!