ಉಡುಪಿ: ಪೊಲೀಸರ ಕರ್ತವ್ಯ ನಿಷ್ಠೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರೂ ಶಾಂತಿಯುತ ಮತ್ತು ನೆಮ್ಮದಿಯ ಜೀವನ ನಡೆಸಲು ಸಹಾಯವಾಗಿದೆ ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು. ಅವರು ಬುಧವಾರ ಜಿಲ್ಲಾ ಪರೇಡ್ ಮೈದಾನದಲ್ಲಿ ಪೊಲೀಸ್ ಇಲಾಖೆಯಿಂದ ಕರ್ತವ್ಯದ ಪಾಲನೆಯಲ್ಲಿಪ್ರಾಣ ಸಮರ್ಪಿಸಿದ ಪೊಲೀಸ್ ಹುತಾತ್ಮರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಷ್ಟದ ಸಂದರ್ಭದಲ್ಲಿ ಮೊದಲಿಗೆ ನೆನಪಾಗುವುದು ಪೊಲೀಸರು. ದೈರ್ಯದಿಂದ ಕರ್ತವ್ಯ ನಿರ್ವಹಿಸುವ ಪೊಲೀಸರ ಸೇವೆ ಶ್ಲಾಘನೀಯ


ಕೊರೋನಾ ಮಹಾಮಾರಿ ಸಂದರ್ಭದಲ್ಲಿ ಪೊಲೀಸರು ಜಿಲ್ಲೆಯ ಗಡಿಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ನಡೆಸಿದರೆ ಪರಿಣಾಮ ಜಾಸ್ತಿ ವೈರಸ್ ಹರಡದಂತೆವಿಶೇಷ ಗಮನವಿಟ್ಟು ನೋಡಿಕೊಂಡಿದ್ದು ಪೊಲೀಸ್ ಇಲಾಖೆ. ಜಿಲ್ಲೆಯಲ್ಲಿ ಬಂದ ಸತತ ಮಳೆಯ ಸಂದರ್ಭದಲ್ಲಿ ಜೀವದ ಹಂಗು ತೊರೆದು ಸಾರ್ವಜನಿಕರಿಗೆ ನೆರವು ನೀಡುವ ಮೂಲಕ ಜಿಲ್ಲೆಯಲ್ಲಿ ಎಲ್ಲಿಯೂ ಸಾವು ನೋವು ಉಂಟಾಗದಂತೆ ತಮ್ಮ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ ಅಲ್ಲದೆ ಜಿಲ್ಲೆಯಲ್ಲಿ ಡ್ರಗ್ಸ್ ಮಹಾಮಾರಿಯನ್ನು ಹತ್ತಿಕ್ಕುವ ಕಾರ್ಯದಲ್ಲಿ ಎಸ್ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ಅತ್ಯುತ್ತಮ ಕೆಲಸ ಮಾಡಿದೆ. ಡ್ರಗ್ಸ್ ಮುಕ್ತ ಜಿಲ್ಲೆಯಾಗುವತ್ತ ಶ್ರನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದರು






ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ,, ಪೊಲೀಸ್ ಅಧಿಕಾರಿಗಳು, ಪತ್ರಕರ್ತರು, ನಿವೃತ್ತ ಪೊಲೀಸ್ ಅಧಿಕಾರಿಗಳು, ಸಮಾಜ ಸೇವಕರು, ಮಾಜಿ ಸೈನಿಕರು ಪುಷ್ಪಗುಚ್ಛ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ, ಉಡುಪಿ ಡಿವೈಎಸ್ಪಿ ಜೈಶಂಕರ್, ಕಾರ್ಕಳ ಡಿವೈಎಸ್ಪಿ ಭರತ್ ರೆಡ್ಡಿ ಹಾಗೂ ಇತರರು ಉಪಸ್ಥೀತರಿದ್ದರು. ಉಡುಪಿ ವೃತ್ತ ನೀರಿಕ್ಷಕ ಮಂಜುನಾಥ್ ಅವರು ಕಾರ್ಯಕ್ರಮ ನಿರೂಪಿಸಿದರು.
