ರೇಡಿಯೋ ಮಣಿಪಾಲದಲ್ಲಿ ಥೈರಾಯ್ಡ್ ಗ್ರಂಥಿಯ ಚಿಕಿತ್ಸೆ ಕುರಿತಾಗಿ ಮಾಹಿತಿ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮತ್ತು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಸಹಯೋಗದಲ್ಲಿ ರೇಡಿಯೋ ಮಣಿಪಾಲ ಸಮುದಾಯ ಬಾನುಲಿ ಕೇಂದ್ರ ಅರ್ಪಿಸುತ್ತಿರುವ ‘ಆರೋಗ್ಯ ದರ್ಶನ’ ಕಾರ್ಯಕ್ರಮದಲ್ಲಿ ಥೈರಾಯ್ಡ್ ಗ್ರಂಥಿಯ ಚಿಕಿತ್ಸೆ ಕುರಿತಾಗಿ ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಜನರಲ್ ಸರ್ಜರಿ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ.ಮಾನಸ ಯು ಮಾತುಕತೆಯಲ್ಲಿ ಪಾಲ್ಗೊಂಡು ಮಾಹಿತಿ ನೀಡಲಿದ್ದಾರೆ.

 ಇದು ಜುಲೈ ತಿಂಗಳ 26 ರಂದು ಬುಧವಾರ ಸಂಜೆ 5 ಗಂಟೆಗೆ ಪ್ರಸಾರವಾಗಲಿದೆ ಮತ್ತು ಗುರುವಾರ ಮಧ್ಯಾಹ್ನ 1 ಗಂಟೆಗೆ ಮರುಪ್ರಸಾರವಾಗಲಿದೆ.  

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ.

 
 
 
 
 
 
 
 
 
 
 

Leave a Reply