ರೇಡಿಯೊ ಮಣಿಪಾಲ್ ನಲ್ಲಿ ಎನ್.ಎಸ್.ಎಸ್ ಶಿಬಿರದ ವಿಶೇಷ

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ   ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ ಅಲೆವೂರಿನ ಶಾಂತಿನಿಕೇತನ ಆಂಗ್ಲಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡ
ಎನ್.ಎಸ್.ಎಸ್ ಶಿಬಿರದ ವಿಶೇಷ  ಕಾರ್ಯಕ್ರಮ ಅಕ್ಟೋಬರ್ ತಿಂಗಳ ದಿನಾಂಕ 18 ರಂದು ಶನಿವಾರ   ಸಂಜೆ 6ಗಂಟೆಗೆ ಪ್ರಸಾರವಾಗಲಿದೆ. ಈ ಸಂಚಿಕೆಯಲ್ಲಿ ಶಿಬಿರಾಧಿಕಾರಿ ಹಾಗೂ ಉಪನ್ಯಾಸಕರಾದ ಪರಮೇಶ್ವರ ಮತ್ತು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಅಕ್ಟೋಬರ್ 19 ರಂದು ಮಧ್ಯಾಹ್ನ 2ಗಂಟೆಗೆ ಇದರ  ಮರುಪ್ರಸಾರವಿರುವುದು.
ರೇಡಿಯೊದಲ್ಲಿ ಮಾತ್ರವಲ್ಲದೆ
 ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ  ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು  ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರ ದ ಪ್ರಕಟಣೆ ತಿಳಿಸಿದೆ.
 
 
 
 
 
 
 
 
 
 
 

Leave a Reply