ರೇಡಿಯೊ ಮಣಿಪಾಲದಲ್ಲಿ ಮದ್ಯವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹ

ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಫೆಬ್ರವರಿ ತಿಂಗಳ ಎರಡನೇ ವಾರ ಆಚರಿಸುವ ಮದ್ಯವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹದ ಹಿನ್ನೆಲೆಯಲ್ಲಿ ಉಡುಪಿ ದೊಡ್ಡಣಗುಡ್ಡೆಯ ಡಾ. ಎ. ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಸಹಯೋಗದಲ್ಲಿ ಫೆಬ್ರವರಿ 11ರಿಂದ ಸರಣಿ ಮಾಹಿತಿ ಕಾರ್ಯಕ್ರಮ ಪ್ರಸಾರವಾಗುತ್ತಿದೆ.

ಇಂದು ಫೆಬ್ರವರಿ 16 ಶುಕ್ರವಾರ ಸಂಜೆ 6 ಗಂಟೆಗೆ ಉಡುಪಿಯ ಡಾ. ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆಯಲ್ಲಿ ಆಪ್ತಸಮಾಲೋಚಕರಾಗಿರುವ ಭಾಗ್ಯಶ್ರೀ ಎನ್ ಅವರು ಮಕ್ಕಳ ಶೋಷಣೆ ಮತ್ತು ಪೋಷಣೆಯ ಕುರಿತು ವಿಶೇಷ ಮಾಹಿತಿ ನೀಡಲಿದ್ದಾರೆ.

 ಇದು ಫೆಬ್ರವರಿ 17 ಶನಿವಾರ ಮದ್ಯಾಹ್ನ 2ಗಂಟೆಗೆ ಮರು ಪ್ರಸಾರವಾಗಲಿದೆ

ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ

https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply