ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಉಡುಪಿ, ನವೆಂಬರ್ 1  : ಜಿಲ್ಲಾಡಳಿತ ಉಡುಪಿ ಜಿಲ್ಲೆ ವತಿಯಿಂದ 65 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ನವೆಂಬರ್ 1 ರಂದು ಅಜ್ಜರಕಾಡು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಜಿ.ಜಗದೀಶ್ ತಾಯಿ ಭುವನೇಶ್ವರಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಧ್ವಜಾರೋಹಣ ನೆರವೇರಿಸಿ, ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿದರು. ಜಿಲ್ಲಾ ಸಶ​ಸ್ರ ಮೀಸಲು ಪಡೆ, ಕರಾವಳಿ ಕಾವಲು ಪೊಲೀಸ್, ಗೃಹ ರಕ್ಷಕ ದಳ, ಅರಣ್ಯ ಇಲಾಖೆ ಮತ್ತಿತರ ತಂಡಗ​ಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.​ ​ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 36 ಮಂದಿ ಸಾಧಕರಿಗೆ ಮತ್ತು 4 ಸಂಘ ಸಂಸ್ಥೆಗಳಿಗೆ ಜಿಲ್ಲಾ ಮಟ್ಟದ ಕನ್ನಡ​ ಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಗರಿಷ್ಠ ಅಂಕ ಪಡೆದ 9 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್​ ಗಳನ್ನು ವಿತರಿಸಲಾಯಿತು.​ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಉಚ್ಚಿಲ ಮಹಾಲ​ಕ್ಷ್ಮೀ  ಆಂಗ್ಲ ಮಾಧ್ಯಮ ಪ್ರೌಢಶಾಲೆಯ​ ಪ.ಜಾತಿಯ ವಿದ್ಯಾರ್ಥಿನಿ ಕು.ಸ್ಪೂರ್ತಿ ಅಶೋಕ ರಾಥೋಡ ಮತ್ತು ಕೊಲ್ಲೂರಿನ ಶ್ರೀ ಮೂಕಾಂಬಿಕಾ ಪ್ರೌಢ ಶಾಲೆಯ​ ಪ.ಪಂಗಡದ ವಿದ್ಯಾರ್ಥಿನಿ ಕು.ರಶ್ಮಿತಾ ಇವರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ, ಸ್ವಾತಂ​ತ್ರ್ಯ ಹೋರಾಟದ ಭಾಗವಾದ​ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಲ ಇವರ ಸ್ಮರಣಾರ್ಥ 1 ಲಕ್ಷ ರೂಪಾಯಿಗಳ ಬಹುಮಾನ​ ನೀಡಿ ಅಭಿನಂದಿಸಲಾಯಿತು.​ 
ಕಾರ್ಯಕ್ರಮದಲ್ಲಿ ಶಾಸಕ ರಘುಪತಿಭಟ್, ಕರಾವಳಿ ಅಭಿವೃದ್ದಿ ಪ್ರಾದಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಪಂಚಾ ಯತ್ ಅಧ್ಯಕ್ಷ ದಿನಕರ ಬಾಬು, ಉಡುಪಿ ನಗರಾಬಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆಸುಮಿತ್ರಾ ನಾಯಕ್, ಉಪಾಧ್ಯಕ್ಷೆ ​ಲಕ್ಷ್ಮೀ ಮಂಜುನಾಥ್, ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಎಸ್ಪಿ​ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು , ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ​ ಉಪಸ್ಥಿತರಿದ್ದರು.
ಕೋವಿಡ್ ಹಿನ್ನಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ನೇರಪ್ರಸಾರವನ್ನು ಸಾರ್ವಜನಿಕರು ಮನೆಯಲ್ಲಿಯೇ ಕುಳಿತು,​ ​ವೆಬ್‌ಕಾಸ್ಟ್ ಮತ್ತು ಫೇಸ್‌ಬುಕ್ ಲೈವ್ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು.  
 
 
 
 
 
 
 
 
 

Leave a Reply