ಉಡುಪಿಯಲ್ಲಿ ನಡೆಯಿತು ಗೌರಿ ಹಸುವಿಗೆ ಅಪರೂಪದ ಸೀಮಂತ ಶಾಸ್ತ್ರ

ಉಡುಪಿ: ರಸ್ತೆ ಅಪಘಾತಕ್ಕೆ ಒಳಗಾಗಿ ಮಣಿಪಾಲದ ಹೊಸಬೆಳಕು ಆಶ್ರಮದಲ್ಲಿ ಆಶ್ರಯ ಪಡೆದಿರುವ ಗೌರಿ ಹಸುವಿಗೆ ಸೀಮಂತ ಶಾಸ್ತ್ರ ಕಾರ್ಯಕ್ರಮವು ಬುಧವಾರ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಹಾಗೂ ಹೊಸಬೆಳಕು ಸೇವಾ ಟ್ರಸ್ಟ್ ಅವರ ಆಯೋಜನೆಯಲ್ಲಿ ಸಂಭ್ರಮದಿಂದ ನಡೆಯಿತು.

ಗೋಮಾತೆ ಗೌರಿಯನ್ನು ಮೀಯಿಸಿ ಬಳಿಕ, ಹಸಿರು ಬಣ್ಣದ ಸೀರೆ ಉಡಿಸಿ ಅಲಂಕರಿಸಿ ನಡಿಗೆ ಯಂತ್ರದ ಸಹಾಯದಿಂದ ಮಂಟಪಕ್ಕೆ ಕರೆತಂದು ರವಿಕೆ ಕಣ, ಅಕ್ಕಿ, ತೆಂಗಿನಕಾಯಿ ಮೊದಲಾದ ಸಾಮಗ್ರಿಗಳೊಂದಿಗೆ ಮಡಿಲು ತುಂಬಿಸಲಾಯಿತು. ಮೊಳಕೆ ಬರಿಸಿದ ನವಧಾನ್ಯಗಳು, ವಿವಿಧ ಹಿಂಡಿಗಳು ಹಾಗೂ ಬಯಕೆಯ ಖಾದ್ಯಗಳನ್ನು ಬಡಿಸಿ ಮುತೈದರು ಆರತಿ ಬೆಳಗಿದರು.

ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸದಸ್ಯರಾದ ಕೆ. ಬಾಲಗಂಗಾಧರ ರಾವ್, ತಾರಾನಾಥ್ ಮೇಸ್ತ ಶಿರೂರು, ಹೊಸಬೆಳಕು ಆಶ್ರಮದ ಸಂಚಾಲಕರಾದ ತನುಲಾ ತರುಣ್, ವಿನಯಚಂದ್ರ ಆಚಾರ್ಯ, ಮಾಂಡವಿ ಆಟೋ ನಿಲ್ದಾಣದ ಚಾಲಕರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply