Janardhan Kodavoor/ Team KaravaliXpress
26 C
Udupi
Monday, May 17, 2021

ಶೀರೂರು ಮಠಕ್ಕೆ ನೂತನ ಉತ್ತರಾಧಿಕಾರಿ​ಯಾಗಿ ​ ಅನಿರುದ್ದ ಸರಳಾತ್ತಾಯ​ ​ ​ಆಯ್ಕೆ

ಉಡುಪಿ: 16ವರ್ಷ ವಯಸ್ಸಿನ ಅನಿರುದ್ದ ​ಸರಳಾತ್ತಾಯ​ ​ಎಂಬವರನ್ನು ಉಡುಪಿ ಅಷ್ಠ ಮಠಗಳಲ್ಲೊಂದಾದ ಶಿರೂರು ಮಠದ 31 ನೇಯ ಪೀಠಾಧಿಪತಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಸೋದೆ ಮಠದ ​ಶ್ರೀಶ್ರೀ  ವಿಶ್ವವಲ್ಲಭತೀರ್ಥ ಸ್ವಾಮೀಜಿ ಹೇಳಿದರು.​​ಅವರು ಮಂಗಳವಾರ ಹಿರಿಯಡ್ಕ ಬಳಿಯ ಶಿರೂರು ಮೂಲ ಮಠದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ವೇದಾಂತ ಸಾಮ್ರಾಜ್ಯದ ಪಟ್ಟಾಭಿಷೇಕಕ್ಕೆ ಸಂಬಂಧಿಸಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಶಿರಸಿ ಬಳಿಯ ಸೋಂದಾದಲ್ಲಿ ಮೇ 11 ರಂದು ಆರಂಭಗೊಳ್ಳಲಿದ್ದು, ಮೇ13 ರಂದು ​ಸನ್ಯಾಸ ​ದೀಕ್ಷೆ, ಪಟ್ಟಾಭಿಷೇಕ ನಡೆಯಲಿದೆ​ ​ಎಂದು ತಿಳಿಸಿದರು.

ವಟುವಿನ ಹಿನ್ನಲೆ, ಗುಣ, ಜ್ಞಾನ, ಆಸಕ್ತಿ ಹಾಗೂ ಜಾತಕ​ ​ಎಲ್ಲವನ್ನೂ ಪ್ರತ್ಯಕ್ಷ​ ಹಾಗು ​ಪರೋಕ್ಷವಾಗಿ ಪರಿಶೀಲನೆ ಮಾಡಿದಾಗ ಎಲ್ಲಾ ಪರೀಕ್ಷೆಯಲ್ಲಿ ಅನಿರುದ್ದನು ಸಮಂಜಸವಾಗಿ ಕಂಡು​ ​ಬಂದಿದ್ದು ಶೀರೂರು ಮಠದ ಪೀಠಾಧಿಪತಿ ಯಾಗಿ ಸನ್ಯಾಸ ದೀಕ್ಷೆ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಮೂಲತಃ ಧರ್ಮಸ್ಥಳದ ಪ್ರಸ್ತುತ ಉಡುಪಿಯಲ್ಲಿ ವಾಸ್ತವ್ಯ ಹೊಂದಿರುವ ​ವಿದ್ವಾನ್ ​ಉದಯ ಸರಳಾತ್ತಾಯ ಮತ್ತು ವಿದ್ಯಾ ದಂಪತಿಗಳ ಪುತ್ರರಾಗಿರುವ ಅನಿರುದ್ದ ತನ್ನ ಹತ್ತನೇ ತರಗತಿಯ ವಿದ್ಯಾಭ್ಯಾಸವನ್ನು ಪೊರೈಸಿದ್ದಾರೆ.

ಅನಿರುದ್ದ ಕಿರಿಯ ವಯಸ್ಸಿನಿಂದಲೂ ದೇವರು ಹಾಗೂ ಧಾರ್ಮಿಕ ಚುಟುವಟಿಕೆಗಳಲ್ಲಿ ಆಸಕ್ತಿ ಉಳ್ಳವನಾಗಿದ್ದು ಮಠ ಸಂಪ್ರದಾಯಗಳ ಆಚರಣೆ ಹಾಗೂ ವಿಧಿ ವಿಧಾನಗಳ ಬಗ್ಗೆ ​ಹತ್ತಿರದ ​ಪರಿಯವಿದ್ದು ವೇದಾಂತ ಶಾಸ್ತ್ರಗಳ ಸಾರವನ್ನು ಅರಿಯುವ ಮನಃ ಉಳ್ಳವನಾಗಿದ್ದು ತಾನೇ ಸ್ವತಃ ಶಿರೂರು ಮಠಕ್ಕೆ ಯತಿಯಾ​ಗುವೆನೆಂದು ತನ್ನ ಅಭಿಪ್ರಾಯವನ್ನು ತನ್ನ ತಂದೆಯ ಬಳಿ ​ಹೇಳಿದ್ದಾರೆ.  

ಈ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಂಡ ಸರಳತ್ತಾಯರು ಆತನ ಜಾತಕವನ್ನು ​ವಿಮರ್ಶಿಸಿ, ಪ್ರಶ್ನೆ​ ​ಹಾಕಿ ಚಿಂತಿಸಿದಾಗ ಆತನಿಗೆ ಪೀಠಾಧಿಪತ್ಯ ಯೋಗವಿದೆ ಎಂದು ತಿಳಿಯಿತು​.

ಮೇ.14ರಂದು ಪಟ್ಟಾಭಿಷೇಕ: ಶಿರಸಿ ಬಳಿಯಿರುವ ಸೋಂದೆ ಮೂಲ ಮಠದಲ್ಲಿ ಮೇ11ರಿಂದ 14ರವರೆಗೆ ಸನ್ಯಾಸ ಸ್ವೀಕಾರ, ಪಟ್ಟಾಭಿಷೇಕ ಮುಂತಾದ ಕಾರ್ಯಕ್ರಮಗಳು ನಡೆಯಲಿದೆ. ಮೇ.13ರ ಬೆಳಗ್ಗೆ 7.30ರಿಂದ 8 ಗಂಟೆಯೊಳಗಿನ ಮುಹೂರ್ತದಲ್ಲಿ ಸನ್ಯಾಸ ಸ್ವೀಕಾರ ನಡೆಯಲಿದೆ.

ಮೇ.14ರಂದು ಮಧ್ಯಾಹ್ನ 12.35ರಿಂದ 12.50ರ ಅಭಿಜಿನ್ ಮುಹೂರ್ತ ದಲ್ಲಿ ಶೀರೂರು ಮಠದ 31ನೇ ಮಠಾಧಿಪತಿಯಾಗಿ ಪಟ್ಟಾಭಿಷೇಕ ನಡೆಯಲಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಸೋದೆ, ಶಿರೂರು ಉಭಯ ಶ್ರೀಗಳಿಂದ ಪಲಿಮಾರು ಮೂಲ ಮಠಕ್ಕೆ ಭೇಟಿ 

ಶೀರೂರು ಮಠಕ್ಕೆ ಪಟ್ಟಾಭಿಷಿಕ್ತರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸೋದೆ ಶ್ರೀವಿಶ್ವ ವಲ್ಲಭ ತೀರ್ಥರ ಜೊತೆಯಾಗಿ ಪಲಿಮಾರು ಮೂಲಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಗೆ ಹಾಗೂ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರಿಗೆ...

ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿದೆ ಪ್ರಗತಿಕಾರ್ಯ

ಉಡುಪಿ: ಜಿಲ್ಲೆಯ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕೆಲವು ನವೀಕರಣ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು ಮೊದಲ ಹಂತದಲ್ಲಿ ಶ್ರೀ ಮಹಾಗಣಪತಿಯ ಗುಡಿ ತೀರ್ಥಮಂಟಪಗಳನ್ನು ನೂತನವಾಗಿ ನಿರ್ಮಿಸಲಾಗುತ್ತಿದೆ .‌ ಸೀಮಿತ ಅವಧಿಯೊಳಗೆ ಕಾರ್ಯಗಳನ್ನು...

​ಕಾಪು ಸಮುದ್ರ ಮಧ್ಯೆ ಸಿಲುಕಿಕೊಂಡಿರುವ 9 ಕಾರ್ಮಿಕರ ರಕ್ಷಣೆಗೆ ಪ್ರಧಾನಿ, ರಕ್ಷಣಾ ಸಚಿವರಿಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನವಿ

ಭಾರತ ಸರಕಾರದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಮತ್ತು ಗೌರವಾನ್ವಿತ ಪ್ರಧಾನಮಂತ್ರಿಯವರಾದ ಶ್ರೀ ನರೇಂದ್ರ ಮೋದಿಯವರೇ, ಉಡುಪಿ ಜಿಲ್ಲೆಯ ಕಾಪು ಸಮುದ್ರ ತೀರದಿಂದ ಸಮುದ್ರದ ಮಧ್ಯದಲ್ಲಿ ಈ ಬಡಪಾಯಿ ಕಾರ್ಮಿಕರು ಸಿಕ್ಕಿಬಿದ್ದಿರುತ್ತಾರೆ, ಸಮುದ್ರ...

ಹೋಪ್ ಇಂಡಿಯಾ ಫೌಂಡೇಶನ್​ ವತಿಯಿಂದ ​ಕೊರೋನಾ ಮುಕ್ತ ಉಡುಪಿ ನಿರ್ಮಾಣ​ ಪಣ ​  ​​

ಉಡುಪಿ ಬೋರ್ಡ್ ಹೈಸ್ಕೂ​ನಲ್ಲಿ  ಆಶ್ರಯ ಪಡೆದಿರುವ ಭಿಕ್ಷುಕರು, ನಿರ್ಗತಿಕರು ಹಾಗೂ ಹೊರ ಜಿಲ್ಲೆಗಳಿಂದ ಬಂದಿರುವ ವಲಸೆ ಕಾರ್ಮಿಕರಲ್ಲಿ ಹೆಚ್ಚಿನವರಿಗೆ ಕೊರೋನಾ ಸೋಂಕು ತಗಲಿರುವ ಬಗ್ಗೆ ಸಂಶಯವಿದ್ದು ಅವರಿಂದ ಉಳಿದ ಸಾರ್ವಜನಿಕರಿಗೆ ಹರಡುವುದನ್ನು ತಪ್ಪಿಸಿ ಕೊರೋನಾ...
error: Content is protected !!