ಬೆಂಗಳೂರು : ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ ಅಧ್ಯಯನ ನಡೆಸಲು ರಾಜ್ಯ ಸರಕಾರ ಮುಂದಾಗಿದೆ. ಈ ಕುರಿತು ಸೋಮವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.
”ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ, ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ| ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ” ಎಂದು ಹೇಳಿಕೊಂಡಿದ್ದಾರೆ






