ಉಪೇಂದ್ರ ಪೈ ಮೆಮೊರಿಯಲ್ ಕಾಲೇಜಿನಲ್ಲಿ ಯುವದಿನಾಚರಣೆ.  

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೊರಿಯಲ್ ಕಾಲೇಜಿನಲ್ಲಿ ಜನವರಿ 12ರಂದು ಸ್ವಾಮಿ ವಿವೇಕಾನಂದರ 158ನೇ ಜನ್ಮ ದಿನಾಚರಣೆಯ ಪ್ರಯುಕ್ತ ‘ ರಾಷ್ಟ್ರೀಯ ಯುವದಿನಾಚರಣೆ’ಯನ್ನು ಹಮ್ಮಿಕೊಳ್ಳಲಾಯಿತು.

ಕಾಲೇಜಿನ ಪ್ರಾಚಾರ್ಯ ಡಾ.ಮಧುಸೂದನ್ ಭಟ್ ರವರು ವಿವೇಕಾನಂದರು ಪ್ರತಿಪಾದಿಸಿದ ಧರ್ಮ ಸಿದ್ಧಾಂತದ ಬಗ್ಗೆ ಉಪನ್ಯಾಸಗೈದರು. ಮನುಷ್ಯನನ್ನು ಪ್ರಾಣಿಗಳಿಂದ ಪ್ರತ್ಯೇಕಿಸುವ ಗುಣವು ಧರ್ಮವಾಗಿದ್ದು ವಿಭಿನ್ನರುಚಿಯನ್ನೊಳಗೊಂಡ ಸಮಾಜದ ವ್ಯಕ್ತಿಗಳು ತಮ್ಮ ಕರ್ಮವನ್ನು ಪ್ರಾಮಾಣಿಕತೆಯಿಂದ, ನಿಸ್ವಾರ್ಥತೆ ಯಿಂದ ಪೂರೈಸಿದಾಗ ಅದು ನಿಜವಾದ ಧರ್ಮವೆನಿಸುವುದು, ಸಾಗುವ ಪಥ ಬೇರೆಬೇರೆಯಾಗಿದ್ದರೂ ಸೇರಬೇಕಾದ ತಾಣ ಭಗವಂತನೊಬ್ಬನೆ ಎಂಬ ವಿವೇಕಾನಂದರ ತತ್ವವನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರು ಹಾಗು ಬೋಧಕ, ಬೋಧಕೇತರ ಸಿಬ್ಬಂದಿವರ್ಗದವರು ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾಯೋಜನಾ ಘಟಕವು ಹಮ್ಮಿಕೊಂಡ ಈ ಕಾರ್ಯಕ್ರಮವನ್ನು ಎನ್.ಎಸ್.ಎಸ್ ಅಧಿಕಾರಿ ಶ್ರೀ ರಾಜೇಶ್ ಕುಮಾರ್ ನಿರ್ವಹಿಸಿದರು. ಸಹಯೋಜನಾಧಿಕಾರಿ ಶ್ರೀ ಚಂದ್ರಶೇಖರ್ ಧನ್ಯವಾದವಿತ್ತರು.

 
 
 
 
 
 
 
 
 
 
 

Leave a Reply