Janardhan Kodavoor/ Team KaravaliXpress
28.6 C
Udupi
Thursday, August 11, 2022
Sathyanatha Stores Brahmavara

ಬಡ ವಿದ್ಯಾರ್ಥಿನಿಗೆ ಮುಖ್ಯ ಶಿಕ್ಷಕ ಮುರಳಿ ಕಡೆಕಾರ್ ವತಿಯಿಂದ ಮನೆ ನಿರ್ಮಾಣ

ಉಡುಪಿ ವಿಧಾನಸಭಾ ಕ್ಷೇತ್ರದ ಕಕ್ಕುಂಜೆ ವಾರ್ಡ್ ನಿವಾಸಿ, ನಿಟ್ಟೂರು ಪ್ರೌಢ ಶಾಲಾ ವಿದ್ಯಾರ್ಥಿನಿಯಾಗಿರುವ ಕು. ನಯನ ಅವರ ಕುಟುಂಬ ತೀರಾ ಬಡವರಾಗಿದ್ದು, ಇದನ್ನು ಮನಗಂಡ ನಿಟ್ಟೂರು ಪ್ರೌಢ ಶಾಲೆ ಮುಖ್ಯೋಪಾಧ್ಯಾಯ ಶ್ರೀ ಮುರಳಿ ಕಡೆಕಾರ್ ಅವರು ತನ್ನ ವೈಯಕ್ತಿಕ ಹಣದಿಂದ ವಿದ್ಯಾರ್ಥಿನಿಯ ಕುಟುಂಬದವರಿಗೆ ಮನೆಯನ್ನು ಕಟ್ಟಿಸಿ ಕೊಟ್ಟರು.

ಶನಿವಾರದಂದು ಪಲಿಮಾರು ಮಠಾಧೀಶ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಮನೆಯ ಹಸ್ತಾಂತರ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ರಘುಪತಿ ಭಟ್ ರವರು ಭಾಗವಹಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರುಗಳಾದ ಬಾಲಕೃಷ್ಣ ಶೆಟ್ಟಿ, ಗಿರಿಧರ್ ಕರಂಬಳ್ಳಿ, ನಿಟ್ಟೂರು ಎಜುಕೇಶನಲ್ ಸೊಸೈಟಿಯ ಪದಾಧಿಕಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!