ಅಮೋಘ್ ಕಂಬಳಕಟ್ಟ ಡಾ। ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಆಯ್ಕೆ

ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ(ರಿ) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಕೊಡ ಮಾಡುವ 2022 ನೇ ಸಾಲಿನ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಉಡುಪಿ ತಾಲೂಕಿನ ಆದಿವುಡುಪಿ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಅಮೋಘ್ ಕಂಬಳಕಟ್ಟ ಆಯ್ಕೆಯಾಗಿದ್ದಾರೆ.

ಡಿಸೆಂಬರ್ 25ರಂದು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಸಂಜೆ 5 ಗಂಟೆಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಡಾ. ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ.ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply