Janardhan Kodavoor/ Team KaravaliXpress
30.6 C
Udupi
Wednesday, August 17, 2022
Sathyanatha Stores Brahmavara

ಮೂರೂರು ವಿಷ್ಣು ಭಟ್ಟರಿಗೆ, ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ​,​ ಅಜಿತ್ ಕುಮಾರ್ ಅಂಬಲಪಾಡಿಗೆ ಟಿ. ವಿ. ರಾವ್ ಪ್ರಶಸ್ತಿ

ಮೂರೂರು ವಿಷ್ಣು ಭಟ್ಟರಿಗೆ ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ ಹಾಗು ಅಜಿತ್ ಕುಮಾರ್ ಅಂಬಲಪಾಡಿ ಅವರಿಗೆ ಟಿ. ವಿ. ರಾವ್ ಪ್ರಶಸ್ತಿ. ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ಕಳೆದ ಏಳು ವರ್ಷಗಳಿಂದ ನೀಡುತ್ತಾ ಬಂದ ಮೇಲಿನ ಎರಡು ಪ್ರಶಸ್ತಿಗಳ ಪ್ರದಾನ ಕಾರ್ಯಕ್ರಮ ನವಂಬರ್ 7ರಂದು ಸಂಜೆ 5.15ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಪನ್ನಗೊಳ್ಳಲಿದೆ.
ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯ ತೀರ್ಥಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹ ಸಂದೇಶ ನೀಡಲಿದ್ದಾರೆ. ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಸ್ತ್ರೀ ವೇಷಧಾರಿ ಮೂರೂರು ವಿಷ್ಣು ಭಟ್ಟರಿಗೂ, ಅಭಿಮಾನಿ ಬಳಗದ ಗೌರವಾಧ್ಯಕ್ಷರಾಗಿದ್ದ ಟಿ. ವಿ. ರಾವ್ ಪ್ರಶಸ್ತಿಯನ್ನು ಹವ್ಯಾಸಿ ಹಿಮ್ಮೇಳ ವಾದಕ, ವೇಷಧಾರಿ ಅಜಿತ್ ಕುಮಾರ್ ಅಂಬಲಪಾಡಿ ಇವರಿಗೂ ಪ್ರದಾನ ಮಾಡಲಾಗುವುದು.
ಅಭಿಮಾನಿ ಬಳಗದ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮತ್ತು ಕಾರ್ಯದರ್ಶಿ ಶ್ರೀ ಎಂ. ಗೋಪಿಕೃಷ್ಣ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!