ಬೈಪಡಿತ್ತಾಯ ದಂಪತಿಗೆ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ’ ಪ್ರಶಸ್ತಿ.

ಉಡುಪಿ: ಯತಿಶ್ರೇಷ್ಠರಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಹೆಸರಿನಲ್ಲಿ ಅವರ ಕರಕಮಲ ಸಂಜಾತ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಅನುಗ್ರಹ ಪೂರ್ವಕವಾಗಿ ಕೊಡಮಾಡುವ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ಕ್ಕೆ ತೆಂಕುತಿಟ್ಟಿನ ಕಲಾವಿದ ದಂಪತಿಗಳಾದ ಶ್ರೀ ಹರಿನಾರಾಯಣ ಬೈಪಡಿತ್ತಾಯ-ಶ್ರೀಮತಿ ಲೀಲಾವತಿ ಬೈಪಡಿತ್ತಾಯ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಏಪ್ರಿಲ್ 6, 2023 ಗುರುವಾರ ಪಲಿಮಾರಿನಲ್ಲಿರುವ ಮೂಲ ಮಠದಲ್ಲಿ ಜರಗಲಿದೆ. ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆಮಾಡುವಲ್ಲಿ ಯಕ್ಷಗಾನ ಕಲಾರಂಗವು ಸಹಕರಿಸಿದೆ. ಪ್ರಶಸ್ತಿಯು ರೂ. 50,000/- ನಗದು ಪುರಸ್ಕಾರ ಸಹಿತ ಪ್ರಶಸ್ತಿ ಪರಿಕರಗಳನ್ನೊಳಗೊಂಡಿರುತ್ತದೆ ಎಂಬುದಾಗಿ ಪಲಿಮಾರು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 
 
 
 
 
 
 
 
 
 
 

Leave a Reply