ಖ್ಯಾತ ತಬಲಾ ವಾದಕ, ತರಬೇತುದಾರ ಕೆ.ಮಂಜಪ್ಪ ಸುವರ್ಣರವರಿಗೆ ‘ನಿಡಂಬೂರು ಬೀಡು ಶ್ರೀ’ ಪ್ರಶಸ್ತಿ ಪ್ರಧಾನ

ನಿಡಂಬೂರು ಶ್ರೀ ಬಬ್ಬು ಸ್ವಾಮಿ ದೈವಸ್ಥಾನ, ಅಂಬಲಪಾಡಿ (ಮೂಡು ಪಾಲು) ಇದರ ವತಿಯಿಂದ ನಡೆದ ಶ್ರೀ ಬಬ್ಬು ಸ್ವಾಮಿ ಮತ್ತು ಪರಿವಾರ ದೈವಗಳ ನೇಮೋತ್ಸವದ ಸಂದರ್ಭದಲ್ಲಿ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ರವರು ಖ್ಯಾತ ತಬಲಾ ವಾದಕ ಹಾಗೂ ಉಚಿತ ತಬಲಾ ತರಬೇತುದಾರ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರಿಗೆ ದಿ! ನಿ.ಬೀ. ಅಣ್ಣಾಜಿ ಬಲ್ಲಾಳ್ ಸ್ಮರಣಾರ್ಥ ‘ನಿಡಂಬೂರು ಬೀಡು ಶ್ರೀ’ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಜಪ್ಪ ಸುವರ್ಣರವರ ಧರ್ಮಪತ್ನಿ ಗೋಧಾವರಿ ಎಮ್. ಸುವರ್ಣ, ನೇಮೋತ್ಸವ ಸಮಿತಿಯ ಅಧ್ಯಕ್ಷ ಅವಿನಾಶ್ ಶೆಟ್ಟಿ, ಸಮಿತಿಯ ಪ್ರಮುಖರಾದ ವಿಶು ಶೆಟ್ಟಿ ಅಂಬಲಪಾಡಿ, ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ನ್ಯಾಯವಾದಿ ಎ.ಸಂಕಪ್ಪ, ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಸ್ಥಳೀಯರಾದ ಜಯಕರ ಶೆಟ್ಟಿ, ಶರತ್ ಶೆಟ್ಟಿ, ಕಿಶೋರ್ ಶೆಟ್ಟಿ, ಪ್ರವೀಣ್ ಶೆಟ್ಟಿ, ಪ್ರಮೋದ್ ಶೆಟ್ಟಿ ಹಾಗೂ ನೇಮೋತ್ಸವ ಸಮಿತಿಯ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply