ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯ ವಿಧ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ ಕೆಮ್ಮಣ್ಣು ಇಲ್ಲಿನ 7ನೇ ತರಗತಿಯ ವಿದ್ಯಾರ್ಥಿ ಅನೀಶ್ ಇವರು ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕುಂದಾಪುರ ಇವರ ಆಶ್ರಯದಲ್ಲಿ ಗಾಂಧಿ ಮೈದಾನ ಕುಂದಾಪುರ ಇಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟದಲ್ಲಿ 600 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುವರು. ಹಾಗೆಯೇ 7ನೇ ತರಗತಿಯ ವಿದ್ಯಾರ್ಥಿ ನವೀಶ್ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುವರು. ಇವರಿಗೆ ಶುಭ ಹಾರೈಸುವ ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾಯಿನಿ, ಶಿಕ್ಷಕ ಶಿಕ್ಷಕೇತರ ಹಾಗೂ ವಿದ್ಯಾರ್ಥಿ ವೃಂದ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ, ಕೆಮ್ಮಣ್ಣು.

 
 
 
 
 
 
 
 
 
 
 

Leave a Reply