ಈ ಸಂದರ್ಭದಲ್ಲಿ ರಾಜ್ಯ ಮಟ್ಟದಲ್ಲಿ ವಿವಿಧ ವಿಭಾಗಗಲ್ಲಿ ಉತ್ತಮ ಸಾಧನೆ ಮಾಡಿದ ಅಧಿಕಾರಿ ಸಿಬ್ಬಂದಿಗಳನ್ನು ಆಯ್ಕೆ ಮಾಡಲಾಗಿದ್ದು, ಅದರಂತೆ “ಜಿಲ್ಲಾ ಚುನಾವಣಾಧಿಕಾರಿ” ವಿಭಾಗದಲ್ಲಿ ಆಯ್ಕೆಯಾದ ಉಡುಪಿ ಜಿಲ್ಲಾಧಿ ಕಾರಿ ಕೂರ್ಮಾರಾವ್ ಎಂ ಅವರಿಗೆ ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರು ಪ್ರಶಸ್ತಿ ನೀಡಿದರು.
.ಈ ಪ್ರಶಸ್ತಿ ಪಡೆಯುವಲ್ಲಿ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳ (ಬಿಎಲ್ಒ), ಮತಗಟ್ಟೆಮಟ್ಟದ ಅಧಿಕಾರಿಗಳ ಮೇಲ್ವಿಚಾರಕರ, ಸಹಾಯಕ ಮತದಾರರ ನೋಂದಣಾಧಿಕಾರಿಗಳ, ಮತದಾರರ ನೋಂದಣಿ ಅಧಿಕಾರಿಯವರ, ಸ್ವೀಪ್ ತಂಡ, ಕಾಲೇಜು ಪ್ರಾಂಶುಪಾಲರುಗಳು, ಜಿಲ್ಲೆಯ ಚುನಾವನಾ ಶಾಖೆಯ ಅಧಿಕಾರಿ, ಸಿಬ್ಬಂದಿಗಳು ಮತ್ತು ಜಿಲ್ಲೆಯಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ನೋಂದಣಿ ಮಾಡಿಕೊಂಡ ಯುವ ಮತ ದಾರರು ಮತ್ತು ಎಲ್ಲಾ ಜಿಲ್ಲೆಯ ಮತದಾರರ ಶ್ರಮವಿದ್ದು ಇವರೆಲ್ಲರನ್ನು ಅಭಿನಂದಿಸುತ್ತಾ, ಮುಂಬರುವ ಚುನಾವಣಾ ಪ್ರಕ್ರೀಯೆಗಳಲ್ಲಿ ಸಹ ಎಲ್ಲಾ ಸಹಕಾರವನ್ನು ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.