Janardhan Kodavoor/ Team KaravaliXpress
27.6 C
Udupi
Wednesday, August 17, 2022
Sathyanatha Stores Brahmavara

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ

ಉಡುಪಿ:ಮಾಜಿ ಸಂಸದ, ಸಚಿವರಾಗಿದ್ದ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರಕಾರ ಇಂದು ಆದೇಶ ನೀಡಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧಿ ನಿಯಮ 1995ರ ಪರಿಚ್ಛೇದ 3 ಮತ್ತು 4(1) ಅಡಿಯಲ್ಲಿ ಪ್ರದತ್ತವಾದ ಅಧಿಕಾರದ ಅನ್ವಯ ಇವರನ್ನು ನೇಮಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಅಧ್ಯಕ್ಷರಾಗಿ ಆಯ್ಕೆಯಾದ ಜಯಪ್ರಕಾಶ್ ಹೆಗ್ಡೆ ಅವರು ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಒಂದು ಬಾರಿ ಮೀನುಗಾರಿಕಾ ಸಚಿವರು ಆಗಿದ್ದು, ಉಡುಪಿ-ಚಿಕ್ಕಮಗಳೂರು ಸಂಸದರಾಗಿಯೂ ಕೆಲಸ ಮಾಡಿದ್ದಾರೆ. ಪ್ರ‌ಸ್ತುತ ಬಿಜೆಪಿಯಲ್ಲಿ ಹಿರಿಯ ನಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!