Janardhan Kodavoor/ Team KaravaliXpress
33 C
Udupi
Tuesday, December 1, 2020

ತೆಂಕನಿಡಿಯೂರು ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಜಯಪ್ರಕಾಶ್ ಶೆಟ್ಟಿಯವರಿಗೆ ಜಾನಪದ ಅಕಾಡೆಮಿಯ ಪುಸ್ತಕ ಬಹುಮಾನ

ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಜಯಪ್ರಕಾಶ್ ಶೆಟ್ಟಿ ಹೆಚ್. ಯವರ ‘ನೆಲದ ನೆನಪು’ ಕೃತಿಗೆ 2014ನೇ ಸಾಲಿನ ಜಾನಪದ ಅಕಾಡೆಮಿಯ ಸಂಕೀರ್ಣ ವಿಭಾಗದ ಪುಸ್ತಕ ಬಹುಮಾನ ಘೋಷಿತವಾಗಿದೆ.

 

ಕರ್ನಾಟಕ ಜಾನಪದ ಅಕಾಡೆಮಿ ದಿನಾಂಕ : 21.11.2020ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಕೇಂದ್ರ ಸಚಿವ ಸದಾನಂದ ಗೌಡ ಅವರಿಂದ ಈ ಪ್ರಶಸ್ತಿಯನ್ನು ಪಡೆಯಲಿದ್ದಾರೆ.

 

ಈಗಾಗಲೇ ಹತ್ತಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿ, 2018ನೇ ಸಾಲಿನ ಕನಕ ಯುವ ಪುರಸ್ಕಾರವನ್ನೂ ಪಡೆದಿರುವ ಡಾ. ಜಯಪ್ರಕಾಶ್ ಶೆಟ್ಟಿಯವರಿಗೆ ಕಾಲೇಜಿನ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯು ಈ ಮೂಲಕ ಶುಭ ಹಾರೈಸಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಬೋಟ್ ದುರಂತ,6ಮಂದಿ ನಾಪತ್ತೆ

ಮಂಗಳೂರು: ಡಿ 1 : ಮೀನುಗಾರಿಕೆಗೆ ತೆರಳಿ ವಾಪಾಸಾಗುತ್ತಿದ್ದ ಬೋಟ್ ಮಗುಚಿ ಬಿದ್ದು 6 ಮಂದಿ ಮೀನುಗಾರರು ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬೋಳಾರದ ಶ್ರೀ ರಕ್ಷಾ ಎಂಬ ಮೀನುಗಾರಿಕಾ ಬೋಟ್...

}ಶ್ರೀಕೃಷ್ಣ ಮಠದ ನಾಮ ಫಲಕದಲ್ಲಿ ಕನ್ನಡವನ್ನು ತೆಗೆದು ಹಾಕಿರುವುದು ಸರಿಯಾದ ಕ್ರಮವಲ್ಲ~ಕಸಾಪ

ಉಡುಪಿ, ಡಿ.1: ಉಡುಪಿ ಶ್ರೀಕೃಷ್ಣ ಮಠದ ನಾಮ ಫಲಕದಲ್ಲಿ ಕನ್ನಡವನ್ನು ತೆಗೆದು ಹಾಕಿರುವುದು ಸರಿಯಾದ ಕ್ರಮವಲ್ಲ. ಕನ್ನಡ ಸಾಹಿತ್ಯ ಪರಿಷತ್ ಇದನ್ನು ಉಗ್ರವಾಗಿ ಖಂಡಿಸುತ್ತದೆ ಎಂದು ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ...

ಹಣತೆ ದೀಪದೊಂದಿಗೆ ಕಲಾತ್ಮಕ ಛಾಯಾಗ್ರಹಣ ನಡೆಸಿದ ಕರಂದಾಡಿ ಶ್ರೀಧರ್ ಶೆಟ್ಟಿಗಾರ್… 

​​ಕಾಪು ಮಜೂರು ಗ್ರಾಮದ ಕರಂದಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ದೀಪೋತ್ಸವ ರವಿವಾರ ನಡೆಯಿತು. ದೀಪೋತ್ಸವದ ಪ್ರಯುಕ್ತ ಶ್ರೀ ದೇವರಿಗೆ ನವಕ ಕಲಶಾಭಿಷೇಕ, ಮಧ್ಯಾಹ್ನ ಅನ್ನ ಸಂತರ್ಪಣೆ, ರಾತ್ರಿ ರಂಗಪೂಜೆ,ತುಳಸಿ ಪೂಜೆ, ತುಳಸಿ ಸಂಕೀರ್ತಣೆ...

ಗ್ರಾ.ಪಂ. ಚುನಾವಣೆ ಘೋಷಣೆ: ಕಾಂಗ್ರೆಸ್ ರಾಜಕೀಯ ದೊಂಬರಾಟ ಪ್ರಾರಂಭ–ಪೆರ್ಣಂಕಿಲ ಶ್ರೀಶ ನಾಯಕ್ ಲೇವಡಿ

ಉಡುಪಿ: ಕೊರೋನಾದ ಸಂಕಷ್ಟದ ಕಾಲದಲ್ಲಿ ನಿದ್ದೆಯಲ್ಲಿ ಮುಳುಗಿದ್ದ ಕಾಂಗ್ರೆಸ್ ನಾಯಕರು ಇದೀಗ ಗ್ರಾಮ ಪಂಚಾಯತ್ ಚುನಾವಣೆಯ ಘೋಷಣೆಯಿಂದ ಎದ್ದು ರಾಜಕೀಯ ದೊಂಬರಾಟದಲ್ಲಿ ತೊಡಗಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ...

ಮಣಿಪಾಲ: ಯುವಕರ ಸಮಯ ಪ್ರಜ್ಞೆಯಿಂದ ಭಾರಿ​ ಬೆಂಕಿ​ ಅನಾಹುತದಿಂದ ಪಾರು

ಮಣಿಪಾಲ : ಸಮೀಪದ ದುಗ್ಲಿ ಪದವು ಎಂಬಲ್ಲಿ ತಡರಾತ್ರಿ ಸುಮಾರಿಗೆ ಬೆಂಕಿಬಿದ್ದಿದ್ದು​ ​ಯುವಕರ ಸಮಯ​ ​ಪ್ರಜ್ಞೆಯಿಂದ ಬಹಳಷ್ಟು ಜೀವ ಹಾನಿ ಮತ್ತು ಆಸ್ತಿಪಾಸ್ತಿ ರಕ್ಷಣೆಯಾಗಿದೆ.​ ಇಂದು ರಾತ್ರಿ ಸುಮಾರು ಹತ್ತು ಗಂಟೆ ಸುಮಾರಿಗೆ ಮಣಿಪಾಲ...
error: Content is protected !!