ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿಯೊಂದಿಗೆ ಸಂವಾದ.

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ, ಜಿಲ್ಲಾ ಗ್ರಂಥಾಲಯ ಮತ್ತು ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಆಶ್ರಯದಲ್ಲಿ ಸೆಪ್ಟೆಂಬರ್ 4 ಸೋಮವಾರ ಬೆಳಗ್ಗೆ 11:30 ರಿಂದ 1 ಗಂಟೆಯವರೆಗೆ ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ ಅವರೊಂದಿಗೆ ಸಂವಾದ ಕಾರ್ಯಕ್ರಮ ಉಡುಪಿ ಅಜ್ಜರಕಾಡಿನ ಜಿಲ್ಲಾ ಗ್ರಂಥಾಲಯದ ಎ ಸಿ ಸಭಾಂಗಣದಲ್ಲಿ ನಡೆಯಲಿದೆ .

ಸಂವಾದದಲ್ಲಿ ಮಾಜಿ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ. ಎಂ.ಎಲ್ ಸಾಮಗ, ಕಲಾವಿದ ಹಾಗೂ ಮೂಳೆ ರೋಗ ತಜ್ಞ ಡಾ. ಸುರೇಶ್ ಶೆಣೆೈ, ಕವಯತ್ರಿ ಜ್ಯೋತಿ ಮಹಾದೇವ್ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಉಪನ್ಯಾಸಕಿ ಡಾ. ಪ್ರಜ್ಞಾ ಮಾರ್ಪಳ್ಳಿ ಇರುತ್ತಾರೆ.

ನಂತರ ಮುಖ್ಯ ಗ್ರಂಥಾಧಿಕಾರಿ ಜಯಶ್ರೀ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣಿೈ, ಅಧ್ಯಕ್ಷ ಪ್ರೊ. ಶಂಕರ್, ತುಳುಕುಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ , ಗಾಂಧಿ ಆಸ್ಪತ್ರೆಯ ನಿರ್ದೇಶಕ ಡಾ. ಹರೀಶ್ಚಂದ್ರ, ಕಸಾಪ ಕಾಪು ತಾಲೂಕು ಅಧ್ಯಕ್ಷ ಪುಂಡಲೀಕ ಮರಾಠೆ, ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್ ಪಿ ಉಪಸ್ಥಿತಿಯಲ್ಲಿ ಮಂಜಮ್ಮ ಜೋಗತಿ ಅವರನ್ನು ಗೌರವಿಸಲಾಗುವುದು ಎಂದು ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾದ೯ನ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 
 
 
 
 
 
 
 
 
 
 

Leave a Reply