ಉದ್ಯಮಿ ಜೋಸೆಫ್ ಮಥಾಯಸ್ ರವರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ದುಬೈ ನಲ್ಲಿರುವ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಹಾಗೂ ದುಬೈ ಕನ್ನಡಿಗರ ಸಹಕಾರದಲ್ಲಿ ದುಬೈ ಶೇಖ್ ರಶೀದ್ ಸಭಾಂಗಣದಲ್ಲಿ ಇತ್ತೀಚಿಗೆ ಜರಗಿದ ‘ವಿಶ್ವಕನ್ನಡ ಹಬ್ಬದಲ್ಲಿ’ ಮೈಸೂರಿನ ಮಹಾರಾಜ ಯದುವೀರ ಶ್ರೀ ಕೃಷ್ಣದತ್ತ ಚಾಮರಾಜ ಒಡೆಯರು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಮತ್ತು ಅರಬ್ ರಾಷ್ಟ್ರದಲ್ಲಿ ಉದ್ಯಮವನ್ನು ಹೊಂದಿರುವ ಜೋಸೆಫ್ ಮಥಾಯಸ್ ಅವರಿಗೆ ‘ಅಂತಾರಾಷ್ಟ್ರೀಯ ವಿಶ್ವ ಮಾನ್ಯ ಪ್ರಶಸ್ತಿ’ ನೀಡಿ ಗೌರವಿಸಿದರು.

ಬಹುಮುಖ ಪ್ರತಿಭೆಯಾಗಿರುವ ಜೋಸೆಫ್ ಮಥಾಯಸ್ ರವರು ಮಂಗಳೂರಿನ ಅಶೋಕನಗರ ಯುವಕ ಸಂಘದ ಮಹಾಪೋಷಕರಾಗಿದ್ದು, ಪ್ರತಿವರ್ಷ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಸೀರೆ, ಧೋತಿ, ಗೌರವ ಧನ, ಅಂಗವಿಕಲರಿಗೆ ಗಾಲಿ ಕುರ್ಚಿ, ಹೊಲಿಗೆ ಯಂತ್ರ, ಸೈಕಲ್ ಮತ್ತು ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಸಹಾಯಧನ ನೀಡುತ್ತಾ ಬಂದಿರುತ್ತಾರೆ. ವಿವಿಧ ಸಂಘ ಸಂಸ್ಥೆಗಳ ಕಾರ್ಯಕ್ರಮಗಳಿಗೆ ಪ್ರಾಯೋಜಕತ್ವವನ್ನು ನೀಡುತ್ತಿರುವ ಜೋಸೆಫ್ ಮಥಾಯಸ್ ಉಡುಪಿಯ ಶಂಕರ್ ಪುರದ ನಿವಾಸಿಯಾಗಿದ್ದು, ಮಂಗಳೂರಿನಲ್ಲಿಯೂ ವಾಸ್ತವ್ಯವನ್ನು ಹೊಂದಿದ್ದಾರೆ. ಅರಬ್ ರಾಷ್ಟ್ರದಲ್ಲಿ ಉದ್ಯಮವನ್ನು ಹೊಂದಿರುವ ಅವರು ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ನಟನೆ, ಸಂಗೀತ ಸಹಿತ ಸಾಂಸ್ಕೃತಿಕ ಕ್ಷೇತ್ರದಲ್ಲೂ ಮುಂದೆ ಇರುವ ಇವರು ನಗುಮುಖದ ಸರಳ ವ್ಯಕ್ತಿತ್ವದವರು. ಇವರು ಸಾಮಾಜಿಕ ಕ್ಷೇತ್ರಕ್ಕೆ ನೀಡಿರುವ ಗಣನೀಯ ಸೇವೆಗಾಗಿ ಈ ಪ್ರಶಸ್ತಿ ಲಭಿಸಿದೆ.

 
 
 
 
 
 
 
 
 
 
 

Leave a Reply