ಕನ್ನಡಿಗ ಛಾಯಾಗ್ರಾಹಕ ಜಿನೇಶ್ ಪ್ರಸಾದ್ ಗೆ ರಾಷ್ಟ್ರೀಯ ‘ಚಿತ್ರಾಂಜಲಿ ಪ್ರಶಸ್ತಿ’

ಹೊಸದಿಲ್ಲಿ: ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಪ್ರದಾನ ಮಾಡುವ ನವದೆಹಲಿಯ ಇಂದಿರಾಗಾಂಧಿ ನ್ಯಾಷನಲ್ ಸೆಂಟರ್ ಫಾರ್ ದಿ ಆರ್ಟ್ ಸಂಸ್ಥೆಯ ಅತ್ಯುನ್ನತ ವಾರ್ಷಿಕ ‘ಚಿತ್ರಾಂಜಲಿ ಪ್ರಶಸ್ತಿ‘ ಯನ್ನು ಅಂತರಾಷ್ಟ್ರೀಯ ಖ್ಯಾತಿಯ ಕನ್ನಡಿಗ ಛಾಯಾಗ್ರಾಹಕ ಜಿನೇಶ್ ಪ್ರಸಾದ್ ಅವರಿಗೆ ಭಾನುವಾರ ಪ್ರಧಾನ ಮಾಡಲಾಯಿತು.

ಭಾನುವಾರ ನವ ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಪ್ರಶಸ್ತಿ ಪ್ರಧಾನ ಮಾಡಿದರು . ಪ್ರಶಸ್ತಿಯು ಒಂದು ಲಕ್ಷ ರೂಪಾಯಿಗಳ ನಗದು, ಫಲಕ ಹಾಗೂ ಪ್ರಮಾಣ ಪತ್ರವನ್ನು ಒಳಗೊಂಡಿದೆ.

ಮೂರೂವರೆ ದಶಕಗಳ ಹಿಂದೆಯೇ “ಪೊರ್ಲು” ಎಂಬ ಹೆಸರಿನೊಂದಿಗೆ ಛಾಯಾಚಿತ್ರ ರಂಗದಲ್ಲಿ ಛಾಪು ಮೂಡಿಸಿದ್ದ ಜಿನೇಶ್ ಪ್ರಸಾದ್ ಅವರು ನೂರಕ್ಕೂ ಹೆಚ್ಚು ರಾಷ್ಟ್ರೀಯ, ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತರಾಗಿದ್ದಾರೆ. ದೇಶ ವಿದೇಶಗಳಲ್ಲಿ ಛಾಯಾಚಿತ್ರ ಪ್ರದರ್ಶನಗಳಲ್ಲಿ ಭಾಗವಹಿಸಿದ್ದಾರೆ.

Leave a Reply