ಡಾ.ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಡಾ. ವಿದ್ಯಾಭೂಷಣ್ ಆಯ್ಕೆ

ಕೋಟ : ಜ್ಞಾನಪೀಠ ಪುರಸ್ಕೃತ ಕಡಲತಡಿಯ ಭಾರ್ಗವ ಡಾ. ಕೋಟ ಶಿವರಾಮ ಕಾರಂತ ಅವರ ಹೆಸರಿನಲ್ಲಿ ಕೊಡಮಾಡುವ ಡಾ. ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಖ್ಯಾತ ಶಾಸ್ತ್ರೀಯ ಸಂಗೀತಗಾರ ಡಾ. ವಿದ್ಯಾಭೂಷಣ್ ಆಯ್ಕೆಯಾಗಿದ್ದಾರೆ.
ವಿದ್ಯಾಭೂಷಣ್ ಅವರು ಹಲವು ದಶಕಗಳಿಂದ ಸಂಗೀತ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಅಕ್ಟೋಬರ್ 10ರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನದಂದು ಪ್ರಶಸ್ತಿ ಪ್ರದಾನ ನೆರವೇರಲಿದೆ. ಕಳೆದ ಹದಿನೆಂಟು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದ್ದಾರೆ.
 ಈಗಾಗಲೇ ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ | ಬಿ. ಎಂ ಹೆಗ್ಡೆ, ಪ್ರಕಾಶ್ ರೈ, ಶ್ರೀಪಡ್ರೆ, ಕವಿತಾ ಮಿಶ್ರ, ನಾಡೋಜ ಡಾ. ಎಸ್.ಎಲ್. ಭೈರಪ್ಪ, ಗಿರೀಶ್ ಭಾರದ್ವಜ್, ರಮೇಶ್ ಅರವಿಂದ್ ಅವರಿಗೆ ಇದುವರೆಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 2023ರ ಕಾರಂತ ಹುಟ್ಟೂರ ಪ್ರಶಸ್ತಿ ಈ ಬಾರಿ ಡಾ.ವಿದ್ಯಾಭೂಷಣ ಅವರಿಗೆ ಸಲ್ಲಲಿದೆ
 
 
 
 
 
 
 
 
 
 
 

Leave a Reply