ಉಡುಪಿ ತಾಲೂಕು 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎಚ್ ಶಾಂತರಾಜ ಐತಾಳ್ ಆಯ್ಕೆ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 14ನೇ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 30.12 2023, ಶನಿವಾರ ಮಣಿಪಾಲದ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿದೆ.

ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಸಂಘಟಕ, ವಿಮರ್ಶಕ, ಸಾಮಾಜಿಕ ಕಳಕಳಿಯ ಎಚ್. ಶಾಂತರಾಜ ಐತಾಳ್ ಆಯ್ಕೆಯಾಗಿದ್ದಾರೆಂದು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ ಎಚ್.ಪಿ ಅವರ ಉಪಸ್ಥಿತಿಯಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಘೋಷಿಸಿದ್ದಾರೆಂದು ತಾಲೂಕು ಕಾರ್ಯದರ್ಶಿ ಜನಾರ್ದನ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply