ಡಾ ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ಸಹೃದಯ ಕಾವ್ಯ ಪ್ರಶಸ್ತಿ ಪ್ರದಾನ

ಉಡುಪಿಯ ಎಂಜಿಎಂ ಕಾಲೇಜಿನ ಉಪನ್ಯಾಸಕಿ ಹಾಗೂ ಸಾಹಿತಿ ಡಾ ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ಸಹೃದಯ ಸಾಹಿತ್ಯ ಪ್ರತಿಷ್ಠಾನ ಸವದತ್ತಿ ನೀಡುವ ‘ಸಹೃದಯ ಕಾವ್ಯ ಪ್ರಶಸ್ತಿ -2024 ‘ನ್ನು ಜೂನ್ 16 ರಂದು ಸವದತ್ತಿಯಲ್ಲಿ ಕನ್ನಡದ ಹಿರಿಯ ವಿಮರ್ಶಕ ಎಚ್.ಎಸ್. ಸತ್ಯನಾರಾಯಣ ಅವರು ಪ್ರದಾನ ಮಾಡಿದರು.

ಸಮಾರಂಭದಲ್ಲಿ ಹಿರಿಯ ಕಥೆಗಾರ ಚೆನ್ನಪ್ಪ ಅಂಗಡಿ, ಸವದತ್ತಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ವೈ ಎಂ ಯಾಕೊಳ್ಳಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಕುಮಾರಿ ಶಿವಪ್ರಿಯ ಕಡೇಚೂರ ಮತ್ತಿತರರು ಉಪಸ್ಥಿತರಿದ್ದರು

 
 
 
 
 
 
 
 

Leave a Reply