ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ “ಕನಕ ಯುವ ಪುರಸ್ಕಾರ”

ಕರ್ನಾಟಕ ಸರಕಾರ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ನೀಡಲಾಗುವ 20 I9 – 20 ನೇ ಸಾಲಿನ ಕನಕ ಯುವ ಪುರಸ್ಕಾರವನ್ನು ಡಾ| ಕಾತ್ಯಾಯಿನಿ ಕುಂಜಿಬೆಟ್ಟು ಇವರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಕನಕ ಜಯಂತಿಯ ಆಚರಣೆಯ ಸಂದರ್ಭದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಪ್ರಶಸ್ತಿ ಪ್ರದಾನ ಮಾಡಿದರು.
ಇದೇ ಸಂದರ್ಭದಲ್ಲಿ ಜಗದ್ಗುರು  ಸಿದ್ದರಾಮಾನಂದ ಸ್ವಾಮೀಜಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಬೈರತಿ ಬಸವರಾಜ್ ಹಾಗೂ ಸಚಿವರು, ಮಾಜಿ ಸಚಿವರು – ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳಾದ  ಶ್ರೀಮತಿ ರಶ್ಮಿ, ನಿರ್ದೇಶಕರಾದ ಎಸ್ ರಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply