ಬೆಂಗಳೂರು: ಅದಾನಿ ಸಂಸ್ಥೆಯ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಕಿಶೋರ್ ಆಳ್ವರವರು ಕರ್ನಾಟಕ ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಅರ್ಹವಾದ ಸೇವೆಯನ್ನು ಸಲ್ಲಿಸುತ್ತಿರುವುದನ್ನು ಗುರುತಿಸಿ, ಮಾಧ್ಯಮ ಕ್ಷೇತ್ರದ ಸಂಸ್ಥೆಯಾದ ಸ್ಪೇಸ್ ಮೀಡಿಯಾ ಸಂಸ್ಥೆ ಬೆಂಗಳೂರಿನ ಗಾಂಧಿ ಭವನದಲ್ಲಿ “ಮಹಾತ್ಮಾ ಗಾಂಧಿ ಅಂತರಾಷ್ಟ್ರೀಯ ಪ್ರಶಸ್ತಿ – 2023” ನೀಡಿ ಗೌರವಿಸಿದೆ.
ಪ್ರಶಸ್ತಿಯನ್ನು ಕರ್ನಾಟಕ ರಾಜ್ಯದ ಘನವೆತ್ತ ರಾಜ್ಯಪಾಲರಾದ ಶ್ರೀ ಥಾವರ್‌ಚಂದ ಗೆಹ್ಲೋಟ್ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು. ಟಿ. ಖಾದರ್, ಎಸ್. ಡಿ. ಎಂ ಶೈಕ್ಷಣಿಕ ಸಮೂಹ ಸಂಸ್ಥೆಗಳ ಸುರೇಂದ್ರ ಕುಮಾರ್ಧರ್ಮಸ್ಥಳ ಉಪಸ್ಥಿತರಿದ್ದರು.