ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿಗೆ ಅತ್ಯುತ್ತಮ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಪ್ರಶಸ್ತಿಯ ಗರಿ 

ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ಮಹಾಮಂಡಳ ವತಿಯಿಂದ ಮುಂಬೈನಲ್ಲಿ ಆಯೋಜಿಸಿದ್ದ ಭಾರತ್ ಕೋ ಆಪರೇಟಿವ್ ಬ್ಯಾಂಕಿಂಗ್ ಸಮ್ಮಿತ್ 2024 ಸಮಾರಂಭದಲ್ಲಿ ಬ್ಯಾಂಕಿಂಗ್ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿಗೆ ಪ್ರತಿಷ್ಠಿತ ಭಾರತ್ ರತ್ನ ಸಹಕಾರಿತ ಸಮ್ಮಾನ್ 2024 ಅತ್ಯುತ್ತಮ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಯ ಮೂಲಕ ಬ್ಯಾಂಕಿಂಗ್ ವ್ಯವಹಾರ ನಡೆಸುತ್ತಿರುವ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಗ್ರಾಹಕ ಸ್ನೇಹಿ ಸೇವೆಯೊಂದಿಗೆ ನಿರಂತರ ಪ್ರಗತಿ ದಾಖಲಿಸುತ್ತಾ ರಾಜ್ಯದ ಪ್ರತಿಷ್ಟಿತ ಪಟ್ಟಣ ಸಹಕಾರಿ ಸಂಸ್ಥೆಯಾಗಿ ಬೆಳೆದು ನಿಂತಿದೆ.

ಸಮಾರಂಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ರವರಿಗೆ ಕೇಂದ್ರ ಸರಕಾರದ ಮಾಹಿತಿ ಹಾಗೂ ಸಂವಹನ ಇಲಾಖೆಯ ಜಂಟಿ ಕಾರ್ಯದರ್ಶಿ ಶ್ರೀ ಸುಮ್ನೇಶ್ ಜೋಷಿಯವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ವ್ಯವಸ್ಥಾಪನಾ ನಿರ್ದೇಶಕರಾದ ಶ್ರೀ ಶರತ್ ಶೆಟ್ಟಿ ಎನ್., ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶ್ರೀಮತಿ ಶಾರಿಕ ಕಿರಣ್ ಮೊದಲಾದವರು ಉಪಸ್ಥಿತರಿದ್ದರು.

 
 
 
 
 
 
 
 

Leave a Reply