ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ನರೇಂದ್ರ ಎಸ್ ಗಂಗೊಳ್ಳಿಗೆ ಸನ್ಮಾನ

ತಮ್ಮ ಒಳಗಡೆ ಎಷ್ಟೇ ನೋವುಗಳಿದ್ದರೂ ಅದನ್ನು ತೋರಿಸಿಕೊಳ್ಳದೆ ಸದಾ ಜನರಲ್ಲಿ ನಗು ತುಂಬುವ ಛಾಯಾಚಿತ್ರಗ್ರಾಹಕರು ನಿಜವಾದ ಬದುಕಿನ ಸಾರ್ಥಕತೆಯ ಸಂದೇಶವನ್ನು ಜಗತ್ತಿಗೆ ತಿಳಿಸುವಂಥವರು. ಈ ಸ್ಪರ್ಧಾತ್ಮಕ ಯುಗದಲ್ಲಿಯೂ ಪರಿಣತಿ ಮತ್ತು ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಂಡು ಗ್ರಾಹಕರ ಮನ ಗೆಲ್ಲುವ ಮೂಲಕ ಅಡೆತಡೆಗಳನ್ನು ಮೀರಿ ಬೆಳೆದು ನಿಲ್ಲುವ ಸಾಮರ್ಥ್ಯವನ್ನು ತೋರಿರುವ ಛಾಯಾಗ್ರಾಹಕರ ನಡೆ ಅಭಿನಂದನೀಯ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು ಯುವ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು.
 ಅವರು  ಸೌತ್ ಕೆನರಾ ಫೋಟೋಗ್ರಾಫರ್ಸ್   ಅಸೋಸಿಯೇಷನ್ (ರಿ) .ದ.ಕ-ಉಡುಪಿ ಜಿಲ್ಲೆ. ಕುಂದಾಪುರ-ಬೈಂದೂರು ವಲಯವು ಶಿಕ್ಷಕರ ದಿನಾಚರಣೆ ಅಂಗವಾಗಿ ಕುಂದಾಪುರದಲ್ಲಿ  ಹಮ್ಮಿಕೊಂಡಿದ್ದ ಶಿಕ್ಷಕ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ನಿಯೋಜಿತ ಅಧ್ಯಕ್ಷರಾದ ದಿವಾಕರ ಶೆಟ್ಟಿ ವಹಿಸಿದ್ದರು. ಶಿಕ್ಷಕರ ಸನ್ಮಾನದ ಅಂಗವಾಗಿ  ನರೇಂದ್ರ ಎಸ್ ಗಂಗೊಳ್ಳಿ ಅವರ ಬಹುಮುಖಿ ಸೇವಾ ಸಾಧನೆಯನ್ನು ಗುರುತಿಸಿ ಸಂಸ್ಥೆಯ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.
ಜಿಲ್ಲಾ ಛಾಯಾಕಾರ್ಯದರ್ಶಿ ಅಮೃತ ಬೀಜಾಡಿ ಸನ್ಮಾನ ಪತ್ರ ವಾಚಿಸಿದರು. ಈ ಸಂದರ್ಭದಲ್ಲಿ ಸಲಹಾ ಸಮಿತಿ ಅಧ್ಯಕ್ಷ ನಾಗರಾಜ್ ರಾಯಪ್ಪನಮಠ, ನಿಕಟ ಪೂರ್ವ ಅಧ್ಯಕ್ಷ ರಾಜಾ ಮಠದಬೆಟ್ಟು, ನಿಯೋಜಿತ ಕಾರ್ಯದರ್ಶಿ ದಿನೇಶ್ ರಾಯಪ್ಪನಮಠ ನಿಯೋಜಿತ ಸಲಹಾ ಸಮಿತಿ ಅಧ್ಯಕ್ಷ ದಿನೇಶ್ ಗೋಡೆ, ಉಪಾಧ್ಯಕ್ಷರಾದ ರಾಘವೇಂದ್ರ ಭಟ್ ,ಪ್ರಕಾಶ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.
ನಾಗೇಶ್ ಕೋಟಾ ಕಾರ್ಯಕ್ರಮವನ್ನು ನಿರೂಪಿಸಿದರು , ಸುರೇಶ್ ಜಮದಗ್ನಿ ವಂದಿಸಿದರು.

Leave a Reply