25 C
Udupi
Tuesday, October 20, 2020

ಉಡುಪಿ ಜಿಲ್ಲೆಯ ಪಡುಬಿದ್ರೆಗೆ ‘ಬ್ಲೂ ಫ್ಲ್ಯಾಗ್’ ಅಂತರಾಷ್ಟ್ರೀಯ ಮಾನ್ಯತೆ

ಉಡುಪಿ: ಜಿಲ್ಲೆಯ ಪಡುಬಿದ್ರೆ ಸೇರಿದಂತೆ ಭಾರತದ ಎಂಟು ಕಡಲ ತೀರಗಳಿಗೆ  “ಬ್ಲೂ ಫ್ಲ್ಯಾಗ್” ಅಂತರರಾಷ್ಟ್ರೀಯ ಮಾನ್ಯತೆ ಲಭಿಸಿದೆ.​ ಗುಜರಾತ್ ನ ಶಿವರಾಜಪುರ, ದಿಯು ಮತ್ತು ದಾಮನ್ ನ ಘೋಗ್ಲಾ, ಕೇರಳದ ಕಪ್ಪದ್, ಕರ್ನಾಟಕದ ಕಾಸರ್ಕೋಡ್ ಮತ್ತು ಪಡುಬಿದ್ರೆ,  ಆಂದ್ರ ಪ್ರದೇಶದ ರುಶಿಕೊಂಡ,   ಒಡಿಶಾದ ಗೋಲ್ಡನ್ ಬೀಚ್, ಅಂಡಮಾನ್ ಮತ್ತು ನಿಕೋಬಾರ್ ನ ರಾಧಾನಗರ್ ಬೀಚ್ ಗಳು ಈ ಅಂತರ ರಾಷ್ಟ್ರೀಯ ಮಾನ್ಯತೆ ಪಡೆದಿವೆ​. ​​
ಪರಿಸರ ತಜ್ಞರು, ವಿಜ್ಞಾನಿಗಳನ್ನೊಳಗೊಂಡ ರಾಷ್ಟ್ರೀಯ ಸ್ವತಂತ್ರ ತಂಡವು ಶಿಫಾರಸ್ಸುಗೊಂಡಿರುವ ಈ ಕಡಲ ತೀರಗಳನ್ನು ಪರಿಶೀಲನೆ ನಡೆಸಿದ್ದು, ದೇಶದ ಎಂಟು ಕಡಲ ತಡಿಗಳು ಮಾನ್ಯತೆಗೆ ಶಿಫಾರಸ್ಸುಗೊಂಡಿದ್ದವು.​ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆದ ಬೀಚ್ ಗಳನ್ನು ವಿಶ್ವದ ಅತಿ ಸ್ವಚ್ಛ ಕಡಲ ತಡಿಗಳೆಂದು ಪರಿಗಣಿಸಲಾಗುತ್ತದೆ. 
 ಡೆನ್ಮಾರ್ಕ್ ನ “ಫೌಂಡೇಶನ್ ಫಾರ್ ಎನ್ವಿರಾನ್ಮೆಂಟ್ ಎಜುಕೇಷನ್ ” ಸಂಸ್ಥೆಯು ಪರಿಸರ ಶಿಕ್ಷಣ ಮತ್ತು ಮಾಹಿತಿ, ನೀರಿನ ಗುಣಮಟ್ಟ, ಪರಿಸರ ನಿರ್ವಹಣೆ ಮತ್ತು ಸಂರಕ್ಷಣೆ, ಭದ್ರತೆ ಹಾಗೂ ಸೇವೆ ಎಂಬ ಪ್ರಮುಖ ನಾಲ್ಕು ಭಾಗಗಳಲ್ಲಿ 33 ಮಾನದಂಡಗಳನ್ನಿಟ್ಟುಕೊಂಡು ​ಗಮನಿಸಿ  ಮಾನ್ಯತೆಯನ್ನು ನೀಡುತ್ತದೆ.
​​
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ನವರಾತ್ರಿ-೪ ~ ಎಲ್ಲೂರಿನ ‘ಅಮ್ನೂರು’~ಕೆ.ಎಲ್.ಕುಂಡಂತಾಯ

ಪಾರಂಪರಿಕ ಸಂಪ್ರದಾಯ, ಶಿಷ್ಟಾಚಾರ, ಒಡಂಬಡಿಕೆ, ಒಪ್ಪಿಗೆಗಳೊಂದಿಗೆ ಕರಾವಳಿಯಲ್ಲಿ ಅಭಿವೃದ್ಧಿಗೊಂಡ ದೇವಾಲಯ ಸಂಸ್ಕೃತಿಯ ಮಾದರಿಯಾಗಿ ಪ್ರಸಿದ್ಧಿಯನ್ನು ಪಡೆದ ದೇವಾಲಯಗಳಲ್ಲಿ ಎಲ್ಲೂರಿನ ಮಹತೋಭಾರ ಶ್ರೀ ವಿಶ್ವೇಶ್ವರ ದೇವ ಸ್ಥಾನ ಒಂದು. ಇಲ್ಲಿಯ ಉಪಸ್ಥಾನ ಸನ್ನಿಧಿಯಾಗಿ "ಅಮ್ನೂರು"...

ಇಂಜಿನಿಯರಿಂಗ್ ಗೆ ಆಸರೆಯಾದ ಹೈನುಗಾರಿಕೆ.

ಗಂಡು ದಿಕ್ಕಿಲ್ಲದ ಕುಟುಂಬವೊಂದಕ್ಕೆ ಹೈನುಗಾರಿಕೆ ಆಸರೆಯಾಗಿ, ಹೆಣ್ಣು ಮಕ್ಕಳ ಭವಿಷ್ಯ ಒಂದು ಹಂತ ತಲುಪಲು ಸಹಕಾರಿಯಾಗಿದೆ. ನೀರೆ ಬೈಲೂರಿನ  ಸುಜಾತ ಪ್ರಭು ಮತ್ತು ದಿವಂಗತ ಸುಬ್ರಾಯ ಪ್ರಭು ದಂಪತಿಗೆ ನಾಲ್ವರು ಹೆಣ್ಣುಮಕ್ಕಳು. ಕ್ಯಾನ್ಸರ್...

ಮುಗಿಯದು ಮುಂದಿನ ದಾರಿ~Click:Ashok Donderangadi

ಮುಗಿಯದು ಮುಂದಿನ ದಾರಿ ಸಾಗಿದಷ್ಟೂ ಇದೆ ಬಯಲು..! ಸಾಗಬೇಕು ಸಂತಸದಿ ಸದಾ ಮೊಗಾರವಿಂದ ಅರಳಿದಂತೆ..! ಸಾಗುವುದು ಬದುಕ ಪಥ ಹೀಗೆಯೇ ಎಂದಿನಂತೆ...!! ಎತ್ತಿನ ಗಾಡಿಯನೇರಿ ಸಾಗುವಾಗ ಕೇಳಿಸುವ ಗಾಲಿಯ ಶಬ್ದ, ಗೊರಸುಗಳು ನೆಲಕ್ಕೆ ಬಲವಾಗಿ ಊರಿದಾಗ ಬರುವ ಗತ್ತಿನ ಸದ್ದು,ಗಾಡಿಗೆ ಕಟ್ಟಿದ...

ಉಡುಪಿಯಲ್ಲಿ 50ಕ್ಕೂ ಅಧಿಕ ದಲಿತರು ಬೌದ್ಧ ಧರ್ಮಕ್ಕೆ ಮತಾಂತರ

ಉಡುಪಿ: ಭಾನುವಾರದಂದು ಉಡುಪಿ ಜಿಲ್ಲಾ ಬೌದ್ಧ ಮಹಾಸಭಾ ವತಿಯಿಂದ ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್‌ರವರ 64ನೇ ದಮ್ಮ ಚಕ್ರ ಪ್ರವರ್ತನಾ ದಿನಾಚರಣೆ ಏರ್ಪಡಿಸಲಾಗಿತ್ತು. ಈ ಸಂದರ್ಭ ಜಿಲ್ಲೆಯ ಸುಮಾರು 50ಕ್ಕೂ ಅಧಿಕ ದಲಿತರು...

ಹೆಲ್ಮಟ್ ಹಾಕದೆ ವಾಹನ ಚಾಲನೆ, ಮೂರೂ ತಿಂಗಳ ಪರವಾನಿಗೆ ರದ್ದು

ಬೆಂಗಳೂರು: ಇನ್ನು ಮುಂದೆ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದರೆ ಕೇವಲ ದಂಡ ಮಾತ್ರವಲ್ಲ ಬದಲಾಗಿ ಮೂರು ತಿಂಗಳು ಚಾಲಕನ ಪರವಾನಗಿ ಅಮಾನತು ಮಾಡಲು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಇದೀಗ ರಾಜ್ಯ ಸರ್ಕಾರ ಈ...
error: Content is protected !!