Janardhan Kodavoor/ Team KaravaliXpress
28.6 C
Udupi
Thursday, August 11, 2022
Sathyanatha Stores Brahmavara

ಉಡುಪಿ ಜಿಲ್ಲೆಯ ಪೋಲಿಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಪ್ರದಾನ

ಉಡುಪಿ: 2017 ಹಾಗೂ 2018 ನೇ ಸಾಲಿನ ಮುಖ್ಯಮಂತ್ರಿಯವರ ಪದಕ ಪ್ರದಾನ  ಬೆಂಗಳೂರಿನಲ್ಲಿ ಶುಕ್ರವಾರ ನಡೆಯಿತು.
ಉಡುಪಿಯ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್, ಉಡುಪಿ ಡಿವೈಎಸ್ಪಿ ಜೈ ಶಂಕರ್, ಉಡುಪಿ ಸಿಪಿಐ ಮಂಜುನಾಥ್ ಮತ್ತು ಕುಂದಾಪುರ ಸಿಪಿಐ ಕೆ ಆರ್ ರವರಿಗೆ ಪದಕ ಪ್ರದಾನ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭಾಗವಹಿಸಿ ಪದಕಗಳನ್ನು ಪ್ರದಾನ ಮಾಡಿದರು.

ಕರ್ತವ್ಯದಲ್ಲಿ ಅತ್ಯುತ್ತಮ ಸಾಧನೆ ನಿರ್ವಹಿಸಿದ್ದಕ್ಕಾಗಿ ಉಡುಪಿ ಜಿಲ್ಲಾ ಎಸ್ಪಿ ಎನ್ ವಿಷ್ಣುವರ್ಧನ್, ಡಿವೈಎಸ್ಪಿ ಜೈ ಶಂಕರ್ ಅವರಿಗೆ 2017 ನೇ ಸಾಲಿನ ಮುಖ್ಯಮಂತ್ರಿ ಪದಕ ಲಭಿಸಿದೆ.

ಉಡುಪಿ ಸಿಪಿಐ ಮಂಜುನಾಥ್ ಮತ್ತು ಕುಂದಾಪುರ ಸಿಪಿಐ ಕೆ ಆರ್ ಗೋಪಿಕೃಷ್ಣ ಅವರಿಗೆ 2018 ನೇ ಸಾಲಿನ ಪದಕ ದೊರೆತಿದೆ.

ಕಾರ್ಯಕ್ರಮದಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!