Janardhan Kodavoor/ Team KaravaliXpress
26.6 C
Udupi
Monday, January 30, 2023
Sathyanatha Stores Brahmavara

ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿಗೆ ಪ್ರಥಮ ಸ್ಥಾನ

ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಇವರ ವತಿಯಿಂದ
ಬೆಂಗಳೂರಿನ ಕೆ.ಎಲ್.ಇ, ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಪದವಿಪೂರ್ವ ವಿದ್ಯಾರ್ಥಿಗಳ ಅಂತರ್ ಕಾಲೇಜು ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಪಿಯು ವಿಭಾಗದಲ್ಲಿ ದೀಪ ಪ್ರಥಮ ಸ್ಥಾನ, ದ್ವಿತೀಯ ಪಿಯುಸಿ ವಿಭಾಗದಲ್ಲಿ ಶ್ರೀಕರ ಭಟ್ ಪ್ರಥಮ ಸ್ಥಾನ ಪಡೆದು ಬಹುಮಾನಿತರಾದರು. ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿಭಾಗಕ್ಕೆ ಪ್ರತ್ಯೇಕ ಸ್ಪರ್ಧೆ ನಡೆಯಿತು. ವಿಜೇತರನ್ನು ಕಾಲೇಜು ಆಡಳಿತಮಂಡಳಿಯ ಅಧ್ಯಕ್ಷರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಕಾರ್ಯದರ್ಶಿ ಡಾ.ಶಶಿಕಿರಣ್ ಉಮಾಕಾಂತ್, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದಿಸಿದರು. ಸಾಂಸ್ಕೃತಿಕ ಸಂಯೋಜಕ, ಕನ್ನಡ ಉಪನ್ಯಾಸಕ ರಮಾನಂದ ರಾವ್‌ರವರು ಮಾರ್ಗದರ್ಶನ ನೀಡಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!