Janardhan Kodavoor/ Team KaravaliXpress
23.4 C
Udupi
Saturday, February 4, 2023
Sathyanatha Stores Brahmavara

ವಿಭಾಗಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉಡುಪಿಯ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ವಿಜೇತ ವಿದ್ಯಾರ್ಥಿಗಳು

ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆಸಲ್ಪಟ್ಟ ಜಿಲ್ಲಾಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ 9 ಮಂದಿ ವಿದ್ಯಾರ್ಥಿಗಳು ಆಯ್ಕೆಯಾಗಿ ಹಾಸನದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಉಡುಪಿಯ ಪೂರ್ಣಪ್ರಜ್ಞ
ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಭಾಗದಲ್ಲಿ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ದೀಪ ಪ್ರಥಮ ಸ್ಥಾನ, ದ್ವಿತೀಯ ಪಿಯುಸಿ ವಿಭಾಗದಲ್ಲಿ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ
ಶ್ರೀಕರ ಭಟ್ ಪ್ರಥಮ ಸ್ಥಾನ ಹಾಗೂ ಚಿತ್ರಕಲೆಯಲ್ಲಿ ಆದರ್ಶ ಭಟ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ವಿಜೇತರನ್ನು
ಆಡಳಿತಮಂಡಳಿಯ ಅಧ್ಯಕ್ಷರಾದ ಪರಮಪೂಜ್ಯ ಈಶಪ್ರಿಯ ತೀರ್ಥ ಶ್ರೀಪಾದರು, ಕಾರ್ಯದರ್ಶಿ ಡಾ| ಶಶಿಕಿರಣ್ ಉಮಾಕಾಂತ್, ಆಡಳಿತಮಂಡಳಿಯ ಸದಸ್ಯರು,
ಪ್ರಾಂಶುಪಾಲರು, ಉಪನ್ಯಾಸಕರು, ಅಭಿನಂದಿಸಿದರು. ಸಾಂಸ್ಕೃತಿಕ ಸಂಯೋಜಕ ರಮಾನಂದ ರಾವ್ ಮಾರ್ಗದರ್ಶನ ನೀಡಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!