ಪ್ರನುಷಾ ಮಹೇಶ್ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

ವಿದ್ಯೋದಯ ಟ್ರಸ್ಟ್(ರಿ.)ನ ಅಂಗಸ೦ಸ್ಥೆಯಾದ ಶ್ರೀ ಅನಂತೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ಪ್ರನುಷಾ ಮಹೇಶ್ ಇವರು ಮಾರ್ಚ್ 5 ಮತ್ತು 6 ರಂದು ಹೈದರಾಬಾದ್ ನಲ್ಲಿ ನಡೆದ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಕೆಡೆಟ್ 14-15 ವಯೋಮಿತಿಯ 47 ಕೆ.ಜಿ ವಿಭಾಗದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯಶಿಕ್ಷಕಿ ಹಾಗೂ ಅಧ್ಯಾಪಕ ವೃಂದ ಶುಭ ಹಾರೈಸಿದ್ದಾರೆ

 
 
 
 
 
 
 
 
 
 
 

Leave a Reply