ರಾಜ್ಯೋತ್ಸವ ಪ್ರಶಸ್ತಿಯ ಅಂತಿಮ ಪಟ್ಟಿ ಅ.27ರಂದು ಪ್ರಕಟ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಸಾಧಕರಿಗೆ ನೀಡುವ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನವೆಂಬರ್ 1ರಂದು ನಡೆಸಲು ಸರ್ಕಾರ ತೀರ್ಮಾನಿಸಿದ್ದು, ಆಯ್ಕೆ ಪಟ್ಟಿ ಮಂಗಳವಾರ ಪ್ರಕಟವಾಗುವ ಸಾಧ್ಯತೆಗಳಿವೆ.

ಒಟ್ಟುಈ ವರ್ಷ 65 ಜನರಿಗೆ ಪ್ರಶಸ್ತಿ ನೀಡಬೇಕಾಗಿತ್ತು ಆದರೆ ಅಂತಿಮವಾಗಿ 80 ಜನರು ಆಯ್ಕೆಯಾಗಿದ್ದಾರೆ. ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಮೈಸೂರು ದಸರಾದಿಂದ ಹಿಂದಿ ರುಗಿದ ಬಳಿಕ ಸಭೆ ನಡೆಸಿ ಪಟ್ಟಿಯನ್ನು 65ಕ್ಕೆ ಇಳಿಸಲಿದ್ದು, ತದನಂತರ ಅಂತಿಮ ಪಟ್ಟಿ ಪ್ರಕಟವಾಗಲಿದೆ ಎಂದು ಸರ್ಕಾರದ ಮೂಲಗಳು ಮಾಹಿತಿ ನೀಡಿವೆ. ಮೂಲಗಳ ಪ್ರಕಾರ ಒಂದೆರಡು ಜಿಲ್ಲೆಗಳು ಹಾಗೂ ಎರಡು ಜಾತಿಗೆ ಹೆಚ್ಚಿನ ಪ್ರಶಸ್ತಿಗಳು ಲಭಿಸಿದ್ದು ಅದನ್ನು ಕಡಿಮೆ ಮಾಡುವ ಸಾಧ್ಯತೆ ಇದೆ.

ಇನ್ನು ಪ್ರಶಸ್ತಿ ಪ್ರದಾನ ಸಮಾರಂಭವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಸರಳವಾಗಿ ನಡೆಸಲು ತೀರ್ಮಾನಿಸಲಾಗಿದೆ. ಪ್ರಶಸ್ತಿ ವಿಜೇತರು ಮತ್ತು ಅವರೊಂದಿಗೆ ಒಬ್ಬರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸ ಲಾಗುವುದು.

Leave a Reply