ಬ್ರಹ್ಮಾವರ ಪತ್ರಕರ್ತರ ಸಂಘದ ಪತ್ರಿಕಾ ದಿನದ ಗೌರವಕ್ಕೆ ರಂಗಪ್ಪಯ್ಯ ಹೊಳ್ಳ ಆಯ್ಕೆ 

ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಪ್ರಯುಕ್ತ ಕೊಡಮಾಡುವ ಗೌರವ ಪುರಸ್ಕಾರಕ್ಕೆ ಹಿರಿಯ ಪತ್ರಕರ್ತ ಕೋಟ ರಂಗಪ್ಪಯ್ಯ ಹೊಳ್ಳ ಆಯ್ಕೆಯಾಗಿದ್ದಾರೆ.

ಹೊಳ್ಳ ಅವರು ಮೂಲತಃ ಶಿಕ್ಷಕರಾಗಿದ್ದು ಸುಧೀರ್ಘ ಕಾಲದವರೆಗೆ ಉದಯವಾಣಿ ಕೋಟ ಭಾಗದ ವರದಿಗಾರರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ರಾಜ್ಯ ಪಠ್ಯ ರಚನ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

 ಜುಲೈ 10 ರಂದು ಬುಧವಾರ ಬೆಳಗ್ಗೆ 12ಗಂಟೆಗೆ ಕೋಟ ವಿವೇಕ ವಿದ್ಯಾ ಸಂಸ್ಥೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಬ್ರಹ್ಮಾವರ ಪತ್ರಕರ್ತರ ಸಂಘ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

 
 
 
 
 
 
 
 

Leave a Reply