ಪತ್ರಕರ್ತ ಡಾ.ಸಂದೀಪ್ ವಾಗ್ಲೆ ಅವರಿಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

ಮಂಗಳೂರು:  ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರ್ಯಾಂಡ್ ಮಂಗಳೂರು  ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ.

ಕನ್ನಡ ಪ್ರಭ ಪತ್ರಿಕೆಯಲ್ಲಿ 2020, ನವಂಬರ್ 25ರಂದು ಪ್ರಕಟಗೊಂಡ  ಸಂದೀಪ್ ವಾಗ್ಲೆ ಅವರ ವರದಿ‘ ಕೋಮು ಸೌಹಾರ್ದ ತೆಗೆ ಸಾಕ್ಷಿ-ಸೇತುವಾದ ಯಕ್ಷಗಾನ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ. 5,001 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತವೆ.

ದಿ ಹಿಂದು ಪತ್ರಿಕೆಯ ಮಂಗಳೂರು ಕಚೇರಿ ಬ್ಯುರೋ ಮುಖ್ಯಸ್ಥರಾದ  ರವಿಪ್ರಸಾದ್ ಕಮಿಲ, ಬೆಸೆಂಟ್  ಮಹಿಳಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ  ಸ್ಮಿತಾ ಶೆಣೈ ಮತ್ತು ಮಂಗಳೂರು ವಿವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಡಾ.ಸೌಮ್ಯ ಕೆ.ಬಿ.ಕಿಕ್ಕೇರಿ ಅವರನ್ನೊಳಗೊಂಡ ತೀರ್ಪುಗಾರರ  ಸಮಿತಿಯು ಈ ಆಯ್ಕೆ  ಮಾಡಿದೆ.

ಜುಲೈ 22ರಂದು ಪತ್ರಿಕಾಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ  ಪ್ರಶಸ್ತಿ ಪ್ರದಾನ ಮಾಡಲಾಗುವುದು. ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್  ಸೋನಾವಣೆ ಪ್ರಶಸ್ತಿ ಪ್ರದಾನ ಮಾಡಲಿರುವರು.

 
 
 
 
 
 
 
 
 
 
 

Leave a Reply