ಸಂಘ ಸಂಸ್ಥೆಗಳಿಂದ ಸಂಸ್ಕೃತಿ ಉಳಿಸುವ ಕೆಲಸ ಶಾಸಕ ಸುನೀಲ್ ಕುಮಾರ್

ನಾಡಿನ ಕಲೆ ಸಾಹಿತ್ಯ ಸಂಸ್ಕೃತಿ ಆಚಾರ ವಿಚಾರಗಳನ್ನು ಉಳಿಸುವ ಪ್ರಾಮಾಣಿಕ ಪ್ರಯತ್ನಗಳನ್ನು ಸಂಘ ಸಂಸ್ಥೆಗಳು ಮಾಡುವುತ್ತಿರುವುದು ಅತ್ಯಂತ ಸುತ್ಯಾರ್ಹವಾಗಿದೆ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕರು ಕರ್ನಾಟಕ ಸರಕಾರದ ಮಾಜಿ ಸಚಿವ ವಿ. ಸುನೀಲ್ ಕುಮಾರ್ ಅಭಿಪ್ರಾಯಪಟ್ಟರು.

ಅವರು ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನ ರಂಗ ಮಂದಿರದಲ್ಲಿ ನಡೆದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ 2023 ಅನ್ನು ಉದ್ಘಾಟಿಸಿ ಮಾತನಾಡಿದರು ಕಲೆ ಸಂಸ್ಕೃತಿಗಳು ಅಳಿಯದಂತೆ ನಮ್ಮ ಸಂಪ್ರದಾಯ ಆಚಾರ ವಿಚಾರಗಳನ್ನು ಪ್ರಸ್ತುತ ಸಮಾಜಕ್ಕೆ ಮತ್ತು ಯುವಜನತೆಗೆ ಅರಿವು ಮೂಡಿಸುತ್ತಿರುವ ಸಾಣೂರು ಯುವಕ ಮಂಡಲದ ಕಾರ್ಯ ರಾಜ್ಯಕ್ಕೆ ಮಾದರಿ ಮತ್ತು ಇಂತಹ ಕಾರ್ಯಕ್ರಮದಲ್ಲಿ ಯುವಜನತೆ ಉತ್ಸಾಹದಿಂದ ಪಾಲ್ಗೊಂಡು ಪ್ರೋತ್ಸಾಹಿಸಬೇಕು ಎಂದರು.

ಸಾಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ವೇದಮೂರ್ತಿ ಶ್ರೀ ಶ್ರೀರಾಮ್ ಭಟ್ ಶುಭ ಹಾರೈಸಿದರು ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರರಾದ ಶ್ರೀಮತಿ ಸುಚೇತಾ ಕಾಮತ್ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಗಣೇಶ್ ಮೊಗವೀರ, ಶ್ರೀ ಮೋಹನ್ ದಾಸ್ ಜಿ. ಪ್ರಭು,ಕರುಣಾಕರ್ ಎಸ್ ಕೋಟ್ಯಾನ್, ಅಶೋಕ್ ಶೆಟ್ಟಿ, ಜನಾರ್ಧನ್ ಆಚಾರ್ಯ, ಶ್ರೀ ಮನೋಹರ್ ಕಾಮತ್ ಮೊದಲಾದವರು ಉಪಸ್ಥಿತರಿದ್ದರು ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಪ್ರಸಾದ್ ಪೂಜಾರಿ ಸರ್ವರನ್ನೂ ಸ್ವಾಗತಿಸಿ ಉಪಾಧ್ಯಕ್ಷ ಶ್ರೀ ಪ್ರಸಾದ್ ಶೆಟ್ಟಿ ಧನ್ಯವಾದಗೈದರು ಕಾರ್ಯದರ್ಶಿ ಶ್ರೀ ಮೋಹನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು ನಂತರ ವಿವಿಧ ಕಲಾ ಪ್ರಕಾರಗಳಾದ ವೀರಗಾಸೆ, ಕಂಸಾಳೆ, ಡೊಳ್ಳು ಕುಣಿತ ಜಾನಪದ ಕಲಾ ಪ್ರಕಾರಗಳು ಪ್ರದರ್ಶನಗೊಂಡಿತು ಯುವಕ ಮಂಡಲದ ಪದಾಧಿಕಾರಿಗಳಾದ ರಾಜೇಶ್ ಪೂಜಾರಿ, ಶುಭಕರ್ ಶೆಟ್ಟಿ, ರೋಹಿತ್ ಆರ್. ಕೆ, ಚಂದ್ರಹಾಸ್ ಪೂಜಾರಿ, ಸೀತಾರಾಮ್, ಪ್ರಕಾಶ್ ರಾವ್ , ಜಯ ಶೆಟ್ಟಿಗಾರ್, ಪ್ರಮೋದ್ ಶೆಟ್ಟಿ ಸಹಕರಿಸಿದರು

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply