Janardhan Kodavoor/ Team KaravaliXpress
23.4 C
Udupi
Saturday, February 4, 2023
Sathyanatha Stores Brahmavara

ಡಾ.ಜಿ.ಶಂಕರ್ ಸರಕಾರಿ ಮಹಿಳಾ ಕಾಲೇಜು- 4 ಉಪನ್ಯಾಸಕರಿಗೆ ಪ್ರಾಧ್ಯಾಪಕ ಹುದ್ದೆ

ಉಡುಪಿ:- ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು, ಇಲ್ಲಿಯ  ನಾಲ್ಕು ಮಂದಿ ಉಪನ್ಯಾಸಕರಿಗೆ ಪ್ರೊಫೆಸರ್ ಹುದ್ದೆಗೆ ಸ್ಥಾನೀಕರಣ ನೀಡಿ ಸರಕಾರವು ಆದೇಶ ನೀಡಿದೆ.
ಕಾಲೇಜಿನ ಪ್ರಾಂಶುಪಾಲರಾದ ಡಾ. ಭಾಸ್ಕರ ಶೆಟ್ಟಿ ಎಸ್, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ  ಡಾ. ಶ್ರೀಧರ್ ಪ್ರಸಾದ್ ಕೆ., ಕನ್ನಡ ವಿಭಾಗ ಮುಖ್ಯಸ್ಥರಾದ ಡಾ. ನಿಕೇತನ, ಕನ್ನಡ ವಿಭಾಗದ ಸಹಪ್ರಾಧ್ಯಾಪಕರಾದ ಡಾ. ರವಿರಾಜ ಶೆಟ್ಟಿ ಅವರನ್ನು ಪ್ರೊಫೆಸರ್ ಹುದ್ದೆಗೆ ನೇಮಿಸಲಾಗಿದೆ.
ಇತಿಹಾಸದಲ್ಲಿ ಇದೇ ಮೊದಲ ಬಾರಿ ಕಾಲೇಜು ಶಿಕ್ಷಣ ಇಲಾಖೆ ಪ್ರೊಫೆಸರ್ ಹುದ್ದೆಯನ್ನು ನೀಡಿ ಆದೇಶಿಸಿದೆ. ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕಾಲೇಜುಗಳಲ್ಲಿ ಅತೀ ಹೆಚ್ಚು ಪ್ರಾಧ್ಯಾಪಕರ ಹುದ್ದೆಯನ್ನು ಪಡೆದ ಕಾಲೇಜು ಎಂಬ ಕೀರ್ತಿಗೆ ಪಾತ್ರವಾಗಿದೆ.
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!